Breaking News

ಜ.31ರವರೆಗೆ ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ ವಿಸ್ತರಣೆ -,ಬೆಂಗಳೂರು ಬಿಟ್ಟರೆ ಮೈಸೂರು, ಬೆಳಗಾವಿಯಲ್ಲಿ ಮಾತ್ರ ಕೋವಿಡ್ ಪ್ರಕರಣಗಳು ಹೆಚ್ಚಿವೆ : ಬಿ.ಸಿ.ನಾಗೇಶ್

Spread the love

ಬೆಂಗಳೂರು: ಈಗಾಗಲೇ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ( Karnataka Government ) 1 ರಿಂದ 9ನೇ ತರಗತಿವರೆಗೆ ಬೆಂಗಳೂರಿನ ಶಾಲೆಗಳಿಗೆ ರಜೆ ( School Holiday ) ಘೋಷಣೆ ಮಾಡಲಾಗಿದೆ. ಈ ಆದೇಶವನ್ನು ಈಗ ಜನವರಿ 31ರವರೆಗೆ ವಿಸ್ತರಿಸಲಾಗಿರೋದಾಗಿ ಶಿಕ್ಷಣ ಸಚಿವರು ( Education Minister ) ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿ ಮಾಹಿತಿ ನೀಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( Minister BC Nagesh ) ಅವರು, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರೋ ಹಿನ್ನಲೆಯಲ್ಲಿ ಜನವರಿ 31, 2022ರವರೆಗೆ 1 ರಿಂದ 9ನೇ ತರಗತಿ ಶಾಲೆಗಳಿಗೆ ರಜೆ ವಿಸ್ತರಣೆ ಮಾಡಿರೋದಾಗಿ ತಿಳಿಸಿದರು.

 

ಕೋವಿಡ್ ನಿಯಂತ್ರಣ ಕ್ರಮಗಳೊಂದಿಗೆ 10, 11 ಮತ್ತು 12ನೇ ತರಗತಿಗಳು ನಡೆಯಲಿವೆ. ಕೋವಿಡ್ ಪರಿಸ್ಥಿತಿಯನ್ನು ನೋಡಿಕೊಂಡು, ಮುಂದೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಬೆಂಗಳೂರು ಬಿಟ್ಟರೆ ಮೈಸೂರು, ಬೆಳಗಾವಿಯಲ್ಲಿ ಮಾತ್ರ ಕೋವಿಡ್ ಪ್ರಕರಣಗಳು ಹೆಚ್ಚಿವೆ ಎಂದರು.


Spread the love

About Laxminews 24x7

Check Also

ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ

Spread the love ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ, ಸಮಾಜದ ಭವಿಷ್ಯ ಕಟ್ಟುವ ಮಹಾಯಜ್ಞ. ಒಬ್ಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ