Breaking News

ಕರ್ನಾಟಕ ಬ್ಯಾಂಕ್ ನೇಮಕಾತಿ 2022: ಮ್ಯಾನೇಜರ್ ಹುದ್ದೆಗಳು ಖಾಲಿ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

Spread the love

ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ: ಮ್ಯಾನೇಜರ್ (Scale -2) ಚಾರ್ಟರ್ಡ್ ಅಕೌಂಟೆಂಟ್ಸ್

ಕರ್ತವ್ಯ ಸ್ಥಳ: ಮಂಗಳೂರು

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

(01-12-2021ಕ್ಕೆ ಚಾರ್ಟರ್ಡ್ ಅಕೌಂಟೆಂಟ್ ಆಗಿರಬೇಕು)

ವಯೋಮಾನ: ಅಭ್ಯರ್ಥಿಗಳಿಗೆ ದಿನಾಂಕ 01/12/2021ಕ್ಕೆ ಒಳಗೊಂಡಂತೆ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
(ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ)

ವೇತನ: ಮಾಸಿಕ ರೂ. 1,00,500

ಆಯ್ಕೆ ವಿಧಾನ: ಅರ್ಹತಾ ಮಾನದಂಡಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ, ನಂತರ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕಿನ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆ ಹಾಗೂ ನಿಗದಿತ ಡಿಡಿ ಜೊತೆಗೆ ಅಂಚೆ ಮೂಲಕ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಸಹಾಯಕ ಪ್ರಧಾನ ವ್ಯವಸ್ಥಾಪಕರು (HR & IR)
ಕರ್ನಾಟಕ ಬ್ಯಾಂಕ್ ಲಿಮಿಟೆಡ್, ಪ್ರಧಾನ ಕಛೇರಿ,
ಮಹಾವೀರ ಸರ್ಕಲ್, ಕಂಕನಾಡಿ, ಮಂಗಳೂರು – 575002

ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ. 600 (ಎಸ್ಸಿ, ಎಸ್ಟಿ ಅಭ್ಯರ್ಥಿಗಳು ರೂ‌. 400) ಡಿ.ಡಿ.ಯನ್ನು ‘Karnataka Bank Officer Grade Application Fee’ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 20, 2022

ಹೆಚ್ಚಿನ ಮಾಹಿತಿಗಾಗಿ (ಅಧಿಸೂಚನೆ)
https://ggle.io/4Xmk


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ