Breaking News

ವೇಶ ಪ್ರಕ್ರಿಯೆ ಪ್ರಾರಂಭ: ಶಾಲೆಯಲ್ಲಿ ಉಚಿತ ಸೀಟು ಪಡೆಯುವುದು ಹೇಗೆ?

Spread the love

ಬೆಂಗಳೂರು, ಜ.12: ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು (RTE) ಕಾಯ್ದೆಯಡಿ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಿದೆ.

ಖಾಸಗಿ ಶಾಲೆಗಳಲ್ಲಿ ಶೇ. 25ರಷ್ಟು ಸೀಟುಗಳನ್ನು ಆರ್ಥಿಕ ದುರ್ಬಲ ವರ್ಗದವರಿಗೆ ಉಚಿತವಾಗಿ ಒದಗಿಸುವುದು ಈ ಯೋಜನೆಯ ಉದ್ದೇಶ.

ಆರ್‌ಟಿಇ ಕಾಯ್ದೆ 2009ರಲ್ಲಿ ಜಾರಿಯಾಗಿದ್ದು, ಅಂದಿನಿಂದಲೂ ರಾಜ್ಯದಲ್ಲಿ ಜಾರಿಯಲ್ಲಿದೆ. 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ವಿವಿಧ ಹಂತಗಳನ್ನು ಹೊಂದಿದೆ. ಒಟ್ಟಾರೆ ಏಪ್ರಿಲ್ 30ಕ್ಕೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ.

ನೆರೆಹೊರೆ ಶಾಲೆಗಳು:

ಆರ್‌ಟಿಇ ಅಡಿ ಅರ್ಜಿ ಸಲ್ಲಿಸುವ ಮಗು ವಾಸಿಸುವಂತಹ ನೆರೆಹೊರೆಯ ಶಾಲೆಗಳಲ್ಲಿ ಪ್ರವೇಶ ನೀಡಲಾಗುತ್ತದೆ.

* ನೆರೆಹೊರೆ ಎಂದರೆ ಗ್ರಾಮೀಣ ಪ್ರದೇಶದಲ್ಲಿ ಕಂದಾಯ ಗ್ರಾಮದ ಭೌಗೋಳಿಕ ಗಡಿ

* ಶಾಲೆ ಇರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯ ಭೌಗೋಳಿಕ ಗಡಿ

* ಮಹಾನಗರ ಪಾಲಿಕೆಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‌ನ ಭೌಗೋಳಿಕ ಗಡಿ.

ಮ್ಯಾಪ್‌ ಮಾಡಲು ಸೂಚನೆ:

ನೆರೆಹೊರೆಯಲ್ಲಿರುವ ಯಾವುದೇ ಶಾಲೆಯನ್ನು ಕೈಬಿಡದಂತೆ ಎಲ್ಲ ಸರ್ಕಾರಿ, ಬಿಬಿಎಂಪಿ ಶಾಲೆಗಳು ಮತ್ತು ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳನ್ನು ಮ್ಯಾಪಿಂಗ್ ಮಾಡಲು ಸೂಚಿಸಲಾಗಿದೆ. ಕೇವಲ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳನ್ನು ಪಟ್ಟಿಯಲ್ಲಿ ಸೇರಿಸುವಂತಿಲ್ಲ. ಅಲ್ಲದೆ, ಅಲ್ಪಸಂಖ್ಯಾತ ಘೋಷಣಾ ಪ್ರಮಾಣ ಪತ್ರ ಪಡೆದಿರುವ ಹಾಗೂ ಈಗಾಗಲೇ ಮುಚ್ಚಿರುವ, ನ್ಯಾಯಾಲಯದಲ್ಲಿ ತಡೆಯಾಜ್ಞೆ ಪಡೆದಿರುವ ಶಾಲೆಗಳನ್ನು ಪಟ್ಟಿಯಿಂದ ಕೈಬಿಡಬೇಕು ಎಂದು ಸೂಚಿಸಲಾಗಿದೆ.

RTE ಸೀಟಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆ ಏನು?

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ 3.5 ವರ್ಷದಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು ಇದರ ಉದ್ದೇಶ. ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಈ ಅರ್ಹತೆಗಳು ಮುಖ್ಯವಾಗುತ್ತವೆ.

* ವಿದ್ಯಾರ್ಥಿ ಕರ್ನಾಟಕದ ಮೂಲ ನಿವಾಸಿ ಆಗಿರಬೇಕು

* ಎಲ್‌ಕೆಜಿಗೆ ಅರ್ಜಿ ಸಲ್ಲಿಸಬೇಕಾದರೆ ಮಗುವಿನ ವಯಸ್ಸು 3 ವರ್ಷ 5 ತಿಂಗಳಿನಿಂದ 5 ವರ್ಷದ ಒಳಗಿರಬೇಕು. (ಅಂದರೆ 2017ರ ಆಗಸ್ಟ್ 1ರಿಂದ 2018ರ ಆಗಸ್ಟ್ 1ರೊಳಗೆ ಮಗುವಿನ ಜನನ ಆಗಿರಬೇಕು)

* ಒಂದನೇ ತರಗತಿಗೆ ಅರ್ಜಿ ಸಲ್ಲಿಸುವ ಮಗುವಿಗೆ 5 ವರ್ಷ 5 ತಿಂಗಳಿನಿಂದ 7 ವರ್ಷದ ಒಳಗೆ ಇರಬೇಕು. (ಅಂದರೆ, 2015ರ ಆಗಸ್ಟ್ 1ರಿಂದ 2016ರ ಆಗಸ್ಟ್ 1ರೊಳಗೆ ಮಗುವಿನ ಜನನ ಆಗಿರಬೇಕು

* ಕುಟುಂಬದ ಆದಾಯ ವಾರ್ಷಿಕ 3.5 ಲಕ್ಷ ಮೀರಿರಬಾರದು.

* ಮಗು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು

* ಮುಖ್ಯವಾಗಿ ಅನಾಥ ಮಗು, ವಿಶೇಷ ಅಗತ್ಯಯುಳ್ಳ ಮಗು (CWSN), ಎಚ್‌ಐವಿ ಸೋಂಕಿತ ಮಗು/ಭಾದಿತ ಮಗು, ವಲಸೆ ಮತ್ತು ಬೀದಿ ಮಗು, ಬರಗಾಲ ಕಾರಣ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬದ ಮಗು, ಮಂಗಳಮುಖಿ ಇಂತಹ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಇದಕ್ಕಾಗಿ ಸೂಕ್ತ ಪ್ರಮಾಣಪತ್ರಗಳನ್ನು ಪಡೆದಿರಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವುಗಳ ನೈಜತೆ ಪರಿಶೀಲಿಸಿ ಅವರೇ ಅರ್ಜಿ ಸಲ್ಲಿಕೆಗೆ ನೆರವಾಗುತ್ತಾರೆ.

ಅರ್ಜಿ ಸಲ್ಲಿಕೆ ಹೇಗೆ?

ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಯಲ್ಲಿ ಉಚಿತ ಸೀಟಿಗಾಗಿ ಅರ್ಜಿ ಸಲ್ಲಿಸುವ ಮಗು, ತಂದೆ ಅಥವಾ ತಾಯಿಯ ಆಧಾರ್‌ ಕಾರ್ಡ್, ಜಾತಿ ಹಾಗೂ ಆದಾಯ ದೃಢೀಕರಣ ಪತ್ರ ಕಡ್ಡಾಯವಾಗಿ ಬೇಕು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅಥವಾ ಸರ್ಕಾರದ ಪಾವತಿ ಕೇಂದ್ರಗಳಾದ ಬೆಂಗಳೂರು ಒನ್, ಕರ್ನಾಟಕ ಒನ್, ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಟಲ್‌ಜಿ ಜನಸ್ನೇಹಿ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ಒಂದು ವೇಳೆ ಪೋಷಕರ ಬಳಿ ಸ್ಮಾರ್ಟ್‌ಫೋನ್ ಇದ್ದಲ್ಲಿ ತಮ್ಮ ಮೊಬೈಲ್‌ ಮೂಲಕವೇ ಅರ್ಜಿ ಸಲ್ಲಿಸಬಹುದು. ಈ ಸಂದರ್ಭದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್‌.ಡಿ. ಸಂಖ್ಯೆಯನ್ನು ಮಾತ್ರ ನಿಗದಿತ ಕಾಲಂನಲ್ಲಿ ನಮೂದಿಸಬೇಕು. ದಾಖಲೆಗಳನ್ನು ಅಪ್‌ಲೋಡ್ ಮಾಡುವ ಅಗತ್ಯವಿಲ್ಲ. ಸೀಟು ಲಭ್ಯವಾಗಿ ಮೂಲ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಒದಗಿಸಬಹುದಾಗಿದೆ.

ಪೋಷಕರಿಗೆ ಎಸ್‌ಎಂಎಸ್‌:

ಅರ್ಜಿ ಸಲ್ಲಿಕೆ ಕ್ರಮಬದ್ಧವಾಗಿದ್ದಲ್ಲಿ ಅರ್ಜಿಯ ಸಂಖ್ಯೆಯ ಸಮೇತ ಪೋಷಕರ ಮೊಬೈಲ್‌ಗೆ ಎಸ್‌ಎಂಎಸ್‌ ಬರುತ್ತದೆ. ಒಂದು ವೇಳೆ ದಾಖಲೆಗಳು ಅಪೂರ್ಣವಾಗಿದ್ದಲ್ಲಿಯೂ ಸಹ ದೋಷಗಳನ್ನು ಸರಿಪಡಿಸಲು ಎಸ್‌ಎಂಎಸ್ ಕಳುಹಿಸಲಾಗುತ್ತದೆ. ಸಕಾಲಕ್ಕೆ ಅದಕ್ಕೆ ಪ್ರತಿಕ್ರಿಯಿಸಬೇಕು.

RTE 2022ನೇ ಸಾಲಿನ ವೇಳಾಪಟ್ಟಿ:

ಜ.7: ಮಾರ್ಗಸೂಚಿ ಪ್ರಕಟ

ಜ.18: ನೆರೆಹೊರೆಯಲ್ಲಿರುವ ಸರ್ಕಾರಿ, ಅನುದಾನಿತ ಮತ್ತ ಖಾಸಗಿ ಶಾಲೆಗಳ ತಾತ್ಕಾಲಿಕಪಟ್ಟಿ ಪ್ರಕಟ

ಜ.24: ನೆರೆಹೊರೆಯ ಶಾಲೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ

ಜ.24 (ಸಂಜೆ): ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ ಪ್ರಕಟಿಸುವುದು. ಖಾಸಗಿ ಶಾಲೆಗಳಲ್ಲಿ ಶೇ 25ರಷ್ಟು ಲಭ್ಯವಿರುವ ಸೀಟುಗಳು ಹಾಗೂ ಅನುದಾನಿತ ಶಾಲೆಗಳಲ್ಲಿ ಕನಿಷ್ಠ ಲಭ್ಯವಿರುವ ಶಾಲಾವಾರು ಸೀಟುಗಳ ಸಂಖ್ಯೆಯನ್ನು ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಥವಾ ಕಚೇರಿಯ ನೋಟಿಸ್‌ ಬೋರ್ಡ್‌ನಲ್ಲಿ ಪ್ರಕಟಿಸುವುದು

ಫೆ.1ಮತ್ತು 2: ಅರ್ಜಿ ಸಲ್ಲಿಸಲು ಪ್ರಯೋಗಾರ್ಥ ಅವಧಿ (ಟ್ರಯಲ್)

ಫೆ.3ರಿಂದ ಮಾರ್ಚ್ 3: ಆರ್‌ಟಿಇ ಅಡಿ ಉಚಿತ ಸೀಟಿಗಾಗಿ ಅರ್ಜಿ ಸಲ್ಲಿಕೆಗೆ ಅವಧಿ

ಫೆ.4ರಿಂದ ಮಾರ್ಚ್ 7: ಸಲ್ಲಿಕೆಯಾಗಿರುವ ಅರ್ಜಿಗಳ ಮೂಲ ದಾಖಲೆಗಳ ನೈಜತೆ ಪರಿಶೀಲನೆ

ಮಾ.14: ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಣೆ

ಮಾ.23: ಆನ್‌ಲೈನ್‌ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ

ಮಾ.24ರಿಂದ ಏ.4: ಶಾಲೆಗಳಲ್ಲಿ ದಾಖಲಾತಿ ಪ್ರಾರಂಭ

ಏ.19: ಆನ್‌ಲೈನ್ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ

ಏ.20ರಿಂದ ಏ.30: ಎರಡನೇ ಸುತ್ತಿನಲ್ಲಿ ಸೀಟು ಪಡೆದವರು ಶಾಲೆಗಳಲ್ಲಿ ದಾಖಲಾಗುವ ಅವಧಿ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ