Breaking News

ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ

Spread the love

ಬೆಂಗಳೂರು: ಶಾಸಕರ ಅನುದಾನವನ್ನು ಕಡಿತ ಮಾಡಬೇಡಿ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.ಕೊರೊನಾ ಕಾಲದಿಂದ ಕ್ಷೇತ್ರಗಳ ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಕುಮಾರಸ್ವಾಮಿಯವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ

.ಹಿಂದಿನ ಸರ್ಕಾರದಲ್ಲಿ ಪಕ್ಷಾತೀತವಾಗಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಜೊತೆಗೆ ರಾಜ್ಯದ ಎಲ್ಲ ಶಾಸಕರುಗಳಿಗೆ ನೀಡಲಾಗಿದ್ದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಬಿಡುಗಡೆ ಮಾಡುವ ಮೂಲಕ ಔದಾರ್ಯ ಪ್ರದರ್ಶಿಸುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋರಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಸರ್ಕಾರಿ ನೌಕರರಿಗೆ `ಹಳೆಯ ಪಿಂಚಣಿ ಮರು ಜಾರಿ’ಗೆ ಕ್ರಮ: CM ಸಿದ್ದರಾಮಯ್ಯ ಭರವಸೆ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿಗೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ