Breaking News

ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್ ಸೂಚಿಸಿದ್ರೆ ಪಾಲಿಸುತ್ತೇವೆ.

Spread the love

ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್ ಸೂಚಿಸಿದ್ರೆ ಪಾಲಿಸುತ್ತೇವೆ. ಹೈಕೋರ್ಟ್ ಆದೇಶದ ವಿರುದ್ಧವಾಗಿ ನಾವು ನಡೆದುಕೊಳ್ಳಲ್ಲ. ಹೈಕೋರ್ಟ್ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನೆಲದ ಕಾನೂನು ಬಗ್ಗೆ ನಮಗೆ ಗೌರವವಿದೆ. ನೆಲದ ಕಾನೂನು ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ. ನಿಯಮ ಪಾಲಿಸುವ ವಿಚಾರದಲ್ಲಿ ಸರ್ಕಾರ ದ್ವಂದ್ವ ನೀತಿ ವಹಿಸಿದೆ. ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಏಕೆ ಪ್ರಕರಣ ದಾಖಲಿಸಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷೇತ್ರದಲ್ಲೇ ಜಾತ್ರೆ ನಡೆಸಲಾಗಿದೆ. ಬಿಜೆಪಿಯವರೇ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ. ಕೊವಿಡ್ ಹೆಚ್ಚಾಗಲು ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರ ಕಾರಣ. ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಪ್ರಧಾನಿ ರಾಲಿ ನಡೆಸಿದ್ರು ಎಂದು ಕಿಡಿಕಾರಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ