Breaking News

ರಸ್ತೆ ಅಪಘಾತದಲ್ಲಿ ಅಣ್ಣನ ಮೃತದೇಹ ನೋಡಲು ಬಂದ ತಂಗಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾಳೆ.

Spread the love

ಮೈಸೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಹೋದರನ ಮೃತದೇಹ ಕಂಡು ತೀವ್ರ ಹೃದಯಾಘಾತಕ್ಕೊಳಗಾಗಿ ಸಹೋದರಿಯೂ ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.

 

ಕೊಡಗಿನ ಪೊನ್ನಪೇಟೆಯ ನಿವಾಸಿ ಮಂಜುನಾಥ್ ಮತ್ತು ರತ್ನ ದಂಪತಿಯ ಮಗಳಾದ ರಶ್ಮಿ(21) ಸಾವನ್ನಪ್ಪಿರುವ ಯುವತಿ. ಇವರು ಮೈಸೂರಿನ ವಿಜಯ ನಗರದಲ್ಲಿ ವಾಸವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದರು.

ಅಪಘಾತದಲ್ಲಿ ಅಣ್ಣ ಸಾವು:

ಯುವತಿ ರಶ್ಮಿಯ ದೊಡ್ಡಪ್ಪನ ಮಗ ಕೀರ್ತಿರಾಜ್ ಸೋಮವಾರ ರಾತ್ರಿ ಹುಣಸೂರು ತಾಲೂಕಿನ ಮೈಸೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಬಳಿಕ ಅಣ್ಣನ ಮೃತದೇಹ ನೋಡಲು ರಶ್ಮಿ ಹುಣಸೂರಿನ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಬಂದಿದ್ದಳು.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ