ಹಾಸನ: ಪಾದಯಾತ್ರೆ ಮಾಡಿದ್ರೆ ಮಾತ್ರ ಮತ ಹಾಕ್ತಾರೆ ಅನ್ಕೊಂಡ್ರೆ ಮತ ಹಾಕದೇ ಇರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಶಾಸಕ ಪ್ರೀತಂಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಮೇಕೆದಾಟು ಪಾದಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಎಲ್ಲರೂ ಅವರವರ ಇತಿಮಿತಿಯಲ್ಲಿರಬೇಕು. ರಾಜಕೀಯ ಪಕ್ಷವೂ ಸೇರಿದಂತೆ ಎಲ್ಲರೂ ತಮ್ಮ ಮಿತಿಯಲ್ಲಿ ಇರಬೇಕು. ಆರೋಗ್ಯ ಕಾಪಾಡಿಕೊಳ್ಳೋದಕ್ಕೆ ಎಲ್ಲರೂ ಸೂಕ್ಷ್ಮವಾಗಿರಬೇಕು. ನಿಯಮಪಾಲನೆ ಮಾಡಬೇಕು. ನಾನಂತೂ ಪಾಲನೆ ಮಾಡ್ತಾ ಇದ್ದೇನೆ. ಭಾರತೀಯ ಜನತಾ ಪಾರ್ಟಿಯೂ ಪಾಲನೆ ಮಾಡುತ್ತಿದೆ ಎಂದು ತಿಳಿಸಿದರು.