Breaking News

ಮೂರನೇ ಹಂತದ ಕೋವಿಡ್ ಅಲೆ ಜೋರಾಗಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ  ಸಭೆ

Spread the love

ನವದೆಹಲಿ: ದೇಶದಲ್ಲಿ ಮೂರನೇ ಹಂತದ ಕೋವಿಡ್ ಅಲೆ ಜೋರಾಗಿದೆ.

ಪ್ರತಿದಿನ ಲಕ್ಷಾಂತರ ಹೊಸ ಹೊಸ ಸೋಂಕಿತ ಪ್ರಕರಣಗಳು ದಾಖಲಾಗ್ತಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ  ಸಭೆ ನಡೆಸಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಕೋವಿಡ್ ವಿರುದ್ಧ ಲಸಿಕೆ ಅತ್ಯುತ್ತಮ ಅಸ್ತ್ರ. ಯಾವುದೇ ಕಾರಣಕ್ಕೂ ಭಯ, ಗಾಬರಿಯಾಗಬೇಡಿ ಎಂದರು.

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪಿಎಂ ವಿಡಿಯೋ ಕಾನ್ಫರೆನ್ಸ್​ವೈದ್ಯಕೀಯ ಮೂಲಸೌಕರ್ಯ ಉನ್ನತೀಕರಣಕ್ಕಾಗಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ 23 ಸಾವಿರ ಕೋಟಿ ರೂ. ಪ್ಯಾಕೇಜ್​ ನೀಡಿದೆ. ಎಲ್ಲರಿಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಅವರು ಮನವಿ ಮಾಡಿದರು.

ಈ ಹಿಂದಿನ ಕೋವಿಡ್ ರೂಪಾಂತರಗಳಿಗೆ ಹೋಲಿಕೆ ಮಾಡಿದಾಗ ಒಮಿಕ್ರಾನ್​ ವೇಗವಾಗಿ ಹರಡುತ್ತಿದೆ. ಆರೋಗ್ಯ ತಜ್ಞರು ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದಾರೆ. ನಾವು ಜಾಗರೂಕರಾಗಿರಬೇಕು ಎಂದಿರುವ ಮೋದಿ, ಯಾವುದೇ ಭಯ, ಆತಂಕ ಬೇಡ ಎಂದರು. ಸಾಂಕ್ರಾಮಿಕದ ವಿರುದ್ಧ ಹೋರಾಡಲು ಮನೆಯಲ್ಲಿ ತಯಾರಿಸುವ ಮನೆಮದ್ದೂ ಸಹ ಉಪಯೋಗಕಾರಿ. ಹಾಗಾಗಿ, ಹೋಂ ಐಸೋಲೇಷನ್​ನಲ್ಲಿ ಇದ್ದುಕೊಂಡೇ ಕೋವಿಡ್ ವಿರುದ್ಧ ಜಯ ಸಾಧಿಸಬಹುದು ಎಂದು ಧೈರ್ಯ ತುಂಬಿದರು.

 


Spread the love

About Laxminews 24x7

Check Also

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

Spread the love ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ