Breaking News

ಜ್ಯದಲ್ಲಿ ‘ಲಾಕ್‌ಡೌನ್‌’ ಇಲ್ಲವೇ ಇಲ್ಲ : ಆರ್‌.ಸುಧಾಕರ್‌ |

Spread the love

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೋನಾ ಕೇಸ್ ಗಳಿಂದಾಗಿ ( Coronavirus Case ) ಮತ್ತೆ ಲಾಕ್ ಡೌನ್ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೇ ಜನರು ಕೊರೋನಾ ಮಾರ್ಗಸೂಚಿ ( Covid-19 Guideline ) ಕ್ರಮಗಳನ್ನು ಅನುಸರಿಸಿ.

ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದ್ರೇ.. ಲಾಕ್ ಡೌನ್ ( Lockdown ) ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲವೇ ಇಲ್ಲ ಎಂಬುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

 

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೊರೋನಾ ಸೋಂಕಿನ ಪ್ರಮಾಣ ಫೆಬ್ರವರಿ ತಿಂಗಳಿನಲ್ಲಿ ಪೀಕ್ ಹಂತಕ್ಕೆ ತಲುಪಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಫೀಕ್ ಹಂತಕ್ಕೆ ತಲುಪಿದ ಬಳಿಕ 3-4 ವಾರಗಳಲ್ಲೇ ಕಡಿಮೆ ಆಗಲಿದೆ ಅಂತಾನೂ ತಿಳಿಸಿದ್ದಾರೆ. ಹೀಗಾಗಿ ಜನರು ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದರು.

 

ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಕೊರೋನಾ, ಓಮಿಕ್ರಾನ್ ನಿಯಂತ್ರಣ ಸಂಬಂಧ ಸಭೆ ನಡೆಸಿದರು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಮಾರ್ಗವಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ. ಹೆಚ್ಚು ಜನಜಂಗುಳಿ ಸೇರದಂತೆ, ಸಭೆ-ಸಮಾರಂಭಗಳನ್ನು ನಿಯಂತ್ರಿಸುವಂತೆ ಸೂಚಿಸಿದ್ದಾರೆ. ಈಗ ಸದ್ಯಕ್ಕೆ ಶೇ.5-6ರಷ್ಟು ಪ್ರಮಾಣದಲ್ಲಿ ಮಾತ್ರವೇ ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ಎಲ್ಲಾ ಗಮನಿಸಿದ್ರೇ ಲಾಕ್ ಡೌನ್ ಮೂಲಕ ಕೊರೋನಾ ನಿಯಂತ್ರಣ ಸರಿಯಲ್ಲ ಎನಿಸಿತ್ತದೆ ಎಂದರು.


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ