Breaking News

ಸಂಕ್ರಾಂತಿ ಹಬ್ಬಕ್ಕೆ ತೆರಳುವ ವಿಚಾರದಲ್ಲಿ ಜಗಳ: ಪತ್ನಿ ಕೊಂದ ಪತಿ

Spread the love

ಕಲಬುರಗಿ: ಸಂಕ್ರಾಂತಿ ಹಬ್ಬಕ್ಕೆ ಪತ್ನಿ ತವರು ಮನೆಗೆ ತೆರಳುವ ವಿಚಾರಕ್ಕೆ ಸಂಬಂಧಿಸಿದ ಜಗಳ ನಡೆದು ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಕಲಬುರಗಿ ನಗರದ ಓಜಾ ಲೇಔಟ್‌ನಲ್ಲಿ ನಡೆದಿದೆ‌.

ಆರತಿ ರಾಠೋಡ್(28) ಪತಿಯಿಂದ ಕೊಲೆಯಾದ ಗೃಹಿಣಿ‌ಯಾಗಿದ್ದಾಳೆ.

ಕಳೆದ ರಾತ್ರಿ ಪತಿ – ಪತ್ನಿ ನಡುವೆ ಜಗಳವಾಗಿದೆ. ಈ ವೇಳೆ ಪತಿ ತಾರಾಸಿಂಗ್ ಸಿಲಿಂಡರ್​ ಅನ್ನು ತಲೆಯ ಮೇಲೆ ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹತ್ಯೆಯ ನಂತರ ಪರಾರಿಯಾಗಿರುವ ತಾರಾಸಿಂಗ್‌ನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಒಂಬತ್ತು ವರ್ಷಗಳ ಹಿಂದೆ ಆರತಿ ಹಾಗೂ ತಾರಾಸಿಂಗ್ ರಾಠೋಡ್ ಮದುವೆಯಾಗಿದ್ದರು. ಪದೇ ಪದೆ ತವರು ಮನೆಗೆ ಹೋಗುವ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು, ಗುರುವಾರ ಕೂಡ ಸಂಕ್ರಾಂತಿಗೆ ತವರು ಮನೆಗೆ ಹೋಗುವ ವಿಚಾರವಾಗಿ ಗಲಾಟೆ ಉಂಟಾಗಿ ಜಗಳ ವಿಕೋಪಕ್ಕೆ ತಿರುಗಿ ಕೊಲೆ ನಡೆದಿದೆ ಎನ್ನಲಾಗಿದೆ‌.

ಇನ್ನು ತಾರಾಸಿಂಗ್ ಕಲಬುರಗಿಯ ಖಾಸಗಿ ಶಾಲೆಯ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ