Breaking News

ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ: ಫೆ.1ರಂದು ಕೇಂದ್ರ ಬಜೆಟ್ ಮಂಡನೆ |

Spread the love

ನವದೆಹಲಿ: ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ( Budget session for FY22 ) ದಿನಾಂಕ ನಿಗದಿ ಪಡಿಸಲಾಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ.

ಆ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.

 

ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ( Budget session of Parliament ) ಜನವರಿ 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಅವರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.

 

ಇನ್ನು ಫೆಬ್ರವರಿ 1, 2022ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಮಾರ್ಚ್ 14ರಿಂದ ಬಜೆಟ್ ಅಧಿವೇಶನದ 2ನೇ ಭಾಗ ನಡೆದು, ಏಪ್ರಿಲ್ 8ರಂದು ಸಂಸತ್ ಬಜೆಟ್ ಅಧಿವೇಶ ಕೊನೆಗೊಳ್ಳಲಿದೆ ಎಂದು ಹೇಳಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ