Breaking News

ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್‌ : ಬೆಂಗಳೂರಿನಲ್ಲಿ 20,121, ರಾಜ್ಯದಲ್ಲಿ 28,723 ಹೊಸ ಕೇಸ್ ಪತ್ತೆ, ವೈರಸ್‌ಗಿಂದು 14 ಮಂದಿ ಬಲಿ

Spread the love

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ( Coronavirus ) ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 28,723 ಜನರಿಗೆ ಕೊರೊನಾ ಸೋಂಕು ( Corona Positive ) ದೃಢಪಟ್ಟಿದೆ.

ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಅವರು, ಕಳೆದ 24 ಗಂಟೆಯಲ್ಲಿ 2,21,205 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಇವರಲ್ಲಿ ಬೆಂಗಳೂರಿನಲ್ಲಿ 20,121 ಸೇರಿದಂತೆ ರಾಜ್ಯಾದ್ಯಾಂತ 28,723 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ’ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 28,723 ಜನರಿಗೆ ಕೊರೋನಾ ದೃಢಪಟ್ಟ ಕಾರಣ ಪಾಸಿಟಿವಿಟಿ ದರ 12.98%ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ 14 ಜನ ಸಾವನ್ನಪ್ಪಿದ್ದಾರೆ.

◾ರಾಜ್ಯದಲ್ಲಿ ಹೊಸ ಪ್ರಕರಣಗಳು : 28,723
◾ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು: 20,121
◾ರಾಜ್ಯದಲ್ಲಿ ಧನಾತ್ಮಕತೆಯ ದರ: 12.98%
◾ಡಿಸ್ಚಾರ್ಜ್ʼಗಳು: 3,105
◾ಸಕ್ರಿಯ ಪ್ರಕರಣಗಳು ರಾಜ್ಯ: 1,41,337 (ಬೆಂಗಳೂರು- 101ಸಾವಿರ)
◾ಸಾವುಗಳು:14 (ಬೆಂಗಳೂರು- 07)
◾ಟೆಸ್ಟ್ʼಗಳು: 2,21,205

https://twitter.com/explore/tabs/covid-19?ref_src=twsrc%5Etfw%7Ctwcamp%5Etweetembed%7Ctwterm%5E1481958906750406657%7Ctwgr%5E%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ