ರಾಯಚೂರು: ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ ಇಬ್ಬರು ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ತಾಲೂಕಿನ ಶಕ್ತಿನಗರದ ಬಳಿಯ ಕೃಷ್ಣಾ ಸೇತುವೆ ಬಳಿ ಶನಿವಾರ ಈ ದುರ್ಘಟನೆ ಸಂಭವಿಸಿದೆ.
ರಾಯಚೂರು ನಗರದ ಕೆಇಬಿ ಕಾಲೋನಿಯ ಗಣೇಶ್(40), ಉದಯಕುಮಾರ್ (38) ಮೃತ ವ್ಯಕ್ತಿಗಳೆಂದು ಗುರುತಿಸಲಾಗಿದೆ. ಗಣೇಶ್ ಮೃತದೇಹ ಪತ್ತೆಯಾಗಿದ್ದು, ಉದಯಕುಮಾರ್ ಶವಕ್ಕಾಗಿ ನದಿಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದೆ.ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಶುಕ್ರವಾರದಂದು ನದಿಗೆ ಇಬ್ಬರು ಸ್ನಾಕ್ಕೆ ತೆರಳಿದ್ದರು. ಆದರೆ ಈ ವೇಳೆ, ಕಾಲು ಜಾರಿ ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.