Breaking News

ನಾಳಿಂದ ಮತ್ತ ಸಾಲಿ ಶುರು : ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ

Spread the love

ಸೋಮವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಎಲ್ಲಾ ಶಾಲೆಗಳು ಆರಂಭವಾಗುತ್ತವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ತಿಳಿಸಿದ್ದಾರೆ.

ಹೌದು ಯಾವ ಶಾಲೆಯಲ್ಲಿ ಶೇ.10ಕ್ಕಿಂತ ಹೆಚ್ಚು ಕೊರೊನಾ ಕೇಸ್‍ಗಳು ಕಂಡು ಬರುತ್ತವೆಯೋ ಆ ಶಾಲೆಗಳಿಗೆ ಮಾತ್ರ ರಜೆ ನೀಡಲಾಗುವುದು. ಬೇರೆ ಶಾಲೆಗಳು ಎಂದಿನಂತೆ ನಡೆಯಲಿವೆ. ರಾಜ್ಯ ಸರ್ಕಾರದ ಆದೇಶದಂತೆ ಪೂರ್ಣ ತಾಲೂಕು, ಜಿಲ್ಲೆಗೆ ರಜೆ ಘೋಷಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಜ.11ರಿಂದ 18ವರೆಗೆ ಒಂದು ವಾರಗಳ ಕಾಲ ಜಿಲ್ಲೆಯ 1ರಿಂದ 9ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು.

ಬಳಿಕ ಜ.17ರಿಂದಲೇ ಶಾಲೆಗಳು ಆರಂಭವಾಗಲಿವೆ ಎಂದು ಜಿಲ್ಲಾಧಿಕಾರಿಗಳು ಪರಿಷ್ಕøತ ಆದೇಶ ಹೊರಡಿಸಿದ್ದರು. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ