Breaking News

ಇನ್ಮುಂದೆ ‘ಕೊರೊನಾ ಟೆಸ್ಟ್’ ಗೆ ಕೊಟ್ಟವರು ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೂ ಹಾಜರಾಗುವಂತಿಲ್ಲ – ರಾಜ್ಯ ಸರ್ಕಾರ ಖಡಕ್ ಆದೇಶ

Spread the love

ಬೆಂಗಳೂರು : ಕೊರೊನಾ ಪರೀಕ್ಷೆಗೆ ( Corona Test ) ಒಳಪಟ್ಟವರು ಕಡ್ಡಾಯವಾಗಿ ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೂ ಹಾಜರಾಗುವಂತಿಲ್ಲ, ವರದಿ ಬರುವವರೆಗೂ ಹೋಮ್ ಐಸೋಲೇಷನ್ ನಲ್ಲಿರಬೇಕು ಎಂದು ರಾಜ್ಯ ಸರ್ಕಾರ ( Karnataka Government ) ಮಹತ್ವದ ಸುತ್ತೋಲೆ ಹೊರಡಿಸಿದೆ.

ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಐಸೋಲೇಷನ್ ( Isolation ) ಕ್ವಾರಂಟೈನ್ ನಲ್ಲಿರುವವರು ( Quarantine ) ಕೊರೊನಾ ಪರೀಕ್ಷೆಗೆ ಒಳಗಾಗಿದ್ದರೆ ಅವರು ವರದಿ ಬರುವವರೆಗೂ ಹೋಮ್ ಐಸೋಲೇಷನ್ ನಲ್ಲಿ ಇರಬೇಕು. ಹೊರಗೆ ಅಡ್ಡಾಡುವಂತಿಲ್ಲ, ಕೋವಿಡ್ ವರದಿ ಬರುವವರೆಗೆ ಕೆಲಸಕ್ಕೆ ಕೂಡ ಹಾಜರಾಗುವಂತಿಲ್ಲ.ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇನ್ನೂ, ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ (Coronavirus ) ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯಾಧ್ಯಂತ 32,793 ಜನರಿಗೆ ಕೋವಿಡ್ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ( Twitter ) ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಅವರು ಮಾಹಿತಿ ನೀಡಿದ್ದು, ಇದೇ ವೇಳೆ ಅವರು ಕಳೆದ 24 ಗಂಟೆಯಲ್ಲಿ 2,18,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಅಂತ ತಿಳಿಸಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ