Breaking News

ಕುವೆಂಪು ವಿಶ್ವವಿದ್ಯಾಲಯದ 24 ಮಂದಿಯಲ್ಲಿ ಸೋಂಕು ಪತ್ತೆ, ಸೀಲ್ ಡೌನ್ ಗೆ ಆದೇಶ

Spread the love

ಶಿವಮೊಗ್ಗ : 19 ವಿದ್ಯಾರ್ಥಿಗಳು ಹಾಗೂ ಐವರು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.

ಇಲ್ಲಿನ ಗ್ರಂಥಾಲಯ ಮತ್ತು ವಸತಿನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಲಪತಿಯವರ ಆದೇಶದ ಮೇರೆಗೆ ವಿಶ್ವವಿದ್ಯಾಲಯ ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.

 

ಜ್ಞಾನ ಸಹ್ಯಾದ್ರಿ ಆವರಣದಲ್ಲಿನ ಎಲ್ಲಾ ಸ್ನಾತಕೋತ್ತರ ಪದವಿ ತರಗತಿಗಳಿಗೆ ಜನವರಿ 17 ರಿಂದ 21 ರವರೆಗೆ ರಜೆ ಘೋಷಣೆ ಮಾಡಲಾಗಿದೆ.

ಅಲ್ಲದೆ ಬೋಧಕ ಸಿಬ್ಭಂದಿಗಳಿಗೆ ಆನ್ ಲೈನ್ ಮೂಲಕ ತರಗತಿ ನಡೆಸುವಂತೆ ನಿರ್ದೇಶನ ನೀಡಲಾಗಿದೆ.


Spread the love

About Laxminews 24x7

Check Also

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

Spread the loveಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ  ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ