Breaking News

ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ: ಆರ್ ಅಶೋಕ್

Spread the love

ಬೆಂಗಳೂರು: ರಾಜ್ಯದಲ್ಲಿ ಜನರ ಹಿತದೃಷ್ಠಿಯಿಂದ, ಆರೋಗ್ಯದ ಹಿತದೃಷ್ಠಿಯಿಂದ ವೀಕೆಂಡ್ ( Weekend Curfew ), ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಲಾಗಿದೆ. ನಮಗೆ ಜನರ ಹಿತವನ್ನು ಕಾಪಾಡುವುದು ಮುಖ್ಯ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ( Minister R Ashok ) ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಜನವರಿ 31ರ ಬಳಿಕ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರೆಸೋದಾ ಅಥವಾ ಬೇಡವಾ ಎನ್ನುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.

 

ನಮಗೆ ಜನರ ಆರೋಗ್ಯ, ಪ್ರಾಣದ ರಕ್ಷಣೆ ಮುಖ್ಯವಾಗಿದೆ. ಈ ಕಾರಣದಿಂದಲೇ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇದು ನಮ್ಮ ಕರ್ತವ್ಯ ಕೂಡ ಆಗಿದೆ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮವನ್ನು ಬದಲಾಯಿಸೋದಕ್ಕೆ ಆಗೋದಿಲ್ಲ ಎಂದರು.


Spread the love

About Laxminews 24x7

Check Also

ಕೇಂದ್ರ ಸರ್ಕಾದಿಂದ ಬಡವರ ರಕ್ತ ಕುಡಿಯುವ ಕೆಲಸ ಆಗುತ್ತಿದೆ.

Spread the loveಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯ ಜನಾಕ್ರೋಶ ಪ್ರತಿಭಟನೆಗೆ ಪ್ರತಿಯಾಗಿ, ನಗರದ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್​​ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ