ಮಹಾರಾಷ್ಟ್ರ ಕಾಂಗ್ರೆಸ್ (Maharashtra Congres) ಅಧ್ಯಕ್ಷರ ಆಕ್ಷೇಪಾರ್ಹ ಹೇಳಿಕೆಯೊಂದು ಅಲ್ಲಿನ ರಾಜಕೀಯ ತಾಪಮಾನ ಹೆಚ್ಚಳಕ್ಕೆ ಕಾರಣವಾಗಿದೆ, ಆದರೆ, ನಂತರ ಅವರು ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಿದ್ದಾರೆ ಮತ್ತು ಪ್ರಧಾನಿ ಮೋದಿ (PM Modi) ಬಗ್ಗೆ ಯಾವುದೇ ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
ತಾವು ಸ್ಥಳೀಯ ಗೂಂಡಾ ಮೋದಿ ಬಗ್ಗೆ ಮಾತನಾಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ನಾನಾ ಪಟೋಲೆ (Nana Patole), ‘ನನ್ನ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದ್ದು, ಅದರಲ್ಲಿ ನಾನು ಮೋದಿ ಎಂಬ ವ್ಯಕ್ತಿಯನ್ನು ಹೊಡೆಯುವ ಬಗ್ಗೆ ಮತ್ತು ಅವಾಚ್ಯ ಶಬ್ದಗಳನ್ನು ನಿಂದಿಸುತ್ತಿರುವುದರ ಬಗ್ಗೆ ಉಲ್ಲೇಖಿಸಲಾಗಿದೆ. ಆದರೆ, ನಾನು ಆ ಪ್ರದೇಶದ ಸ್ಥಳೀಯ ಗೂಂಡಾ ಆಗಿರುವ ಮೋದಿಯ ಬಗ್ಗೆ ಮಾತನಾಡುತ್ತಿದ್ದೇನೆ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಪ್ರಧಾನಿ ಮೋದಿ ಬಗ್ಗೆ ಯಾವುದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ’ ಎಂದಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಅವರ ಹೇಳಿಕೆಯಲ್ಲಿ, ‘ನಾನು ಮೋದಿಯನ್ನು ಹೊಡೆಯಬಲ್ಲೆ, ನಾನು ಮೋದಿ ವಿರುದ್ಧ ಅವಾಚ್ಯ ಶಬ್ದಗಳನ್ನು ಕೂಡ ಬಳಸಬಲ್ಲೆ’ ಎಂದಿದ್ದಾರೆ. ಮಹಾರಾಷ್ಟ್ರದ ಭಂಡಾರಾದಲ್ಲಿ ಜಿಲ್ಲಾ ಪರಿಷತ್ ಮತ್ತು ಪಂಚಾಯತ್ ಸಮಿತಿ ಪರ ಪ್ರಚಾರ ನಡೆಸಿದ ಬಳಿಕ ಕಾರ್ಯಕರ್ತರ ಸಮ್ಮುಖದಲ್ಲಿ ಪಟೋಲೆ ಈ ಹೇಳಿಕೆ ನೀಡಿದ್ದಾರೆ.
Laxmi News 24×7