ತಮಿಳುನಾಡಿನ ಬಿಜೆಪಿ ರಾಜ್ಯ ಐಟಿ ಮತ್ತು ಸಾಮಾಜಿಕ ಮಾಧ್ಯಮ ಸೆಲ್‌ನ ಅಧ್ಯಕ್ಷ ನಿರ್ಮಲ್ ಕುಮಾರ್ ಅವರು ಸಲ್ಲಿಸಿದ ದೂರಿನ ಕುರಿತು ಪ್ರತಿಕ್ರಿಯೆ ಕೋರಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್‌ಗೆ ನೋಟಿಸ್ ಜಾರಿ ಮಾಡಿದೆ.
ಇತ್ತೀಚೆಗೆ ತಮಿಳು ರಿಯಾಲಿಟಿ ಶೋ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಸಹ್ಯಕರ ಕಾಮೆಂಟ್‌ಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿತ್ತು.
ಝೀ ತಮಿಳು ಟಿವಿ ಚಾನೆಲ್ ನಲ್ಲಿ ಜನವರಿ 15 ರಂದು ಪ್ರಸಾರವಾದ, ಜೂನಿಯರ್ ಸೂಪರ್ ಸ್ಟಾರ್ ಸೀಸನ್ 4ರ ಒಂದು ಸ್ಕಿಟ್ ವಿರುದ್ಧ ಸಚಿವಾಲಯಕ್ಕೆ ದೂರು ನೀಡಲಾಗಿದೆ. ದೂರಿನ ಸಾರವನ್ನು ಲಗತ್ತಿಸಿರುವ ಸಚಿವಾಲಯ, 7 ದಿನಗಳ ಅವಧಿಯೊಳಗೆ ಈ ಕುರಿತು ಪ್ರತಿಕ್ರಿಯೆ ನೀಡಲು ವಿನಂತಿಸಿದ್ದು, ವಿಫಲವಾದರೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನೋಟೀಸ್ ನೀಡಿದೆ.