Breaking News

ಹೆದರಿಸಿ ಲಂಚ ಪಡೆಯುತ್ತಿದ್ದಇಬ್ಬರು ಕಾನ್‌ಸ್ಟೆಬಲ್‌ಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ

Spread the love

ಬೆಳಗಾವಿ: ಮಟ್ಕಾ ಜೂಜಾಟ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುತ್ತಿದ್ದ ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬುಧವಾರ ಬಿದ್ದಿದ್ದಾರೆ.

ಸಿದ್ಧು ಮೊಕಾಶಿ ಮತ್ತು ವಿಠ್ಠಲ ಚಿಪ್ಪಲಕಟ್ಟಿ ಬಲೆಗೆ ಬಿದ್ದವರು.

 

ಖಾಸಗಿ ಕೆಲಸಕ್ಕೆಂದು ಖಾನಾಪುರಕ್ಕೆ ಹೋಗಿದ್ದ ಬೆಳಗಾವಿಯ ಪರಶುರಾಮ ಗಾಡಿವಡ್ಡರ ಎನ್ನುವವರ ಮೇಲೆ ಮಟ್ಕಾ ಪ್ರಕರಣ ದಾಖಲಿಸುವುದಾಗಿ ಆ ಕಾನ್‌ಸ್ಟೆಬಲ್‌ಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದಿರಲು ₹ 50ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ₹ 15ಸಾವಿರಕ್ಕೆ ಒಪ್ಪಿದ್ದರು. ಹೀಗಾಗಿ, ಪರಶುರಾಮ ಅವರು ಎಸಿಬಿಗೆ ಸೋಮವಾರ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿ ಎಸಿಬಿ ಅಧಿಕಾರಿಗಳು, ₹ 15ಸಾವಿರ ಲಂಚ ಪಡೆಯುವಾಗ ದಾಳಿ ನಡೆಸಿ ಕಾನ್‌ಸ್ಟೆಬಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಎಸಿಬಿ ಎಸ್ಪಿ ಬಿ.ಎಸ್. ನೇಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನೀಲಕುಮಾರ ಮತ್ತು ಸಿಬ್ಬಂದಿ ಈ ದಾಳಿ‌ ನಡೆಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ