Breaking News

ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Spread the love

ಧಾರವಾಡ: ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮುತ್ತುರಾಜ್ ಶಿವಣ್ಣವರ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮುತ್ತುರಾಜ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ನಿವಾಸಿ. ಪತ್ನಿಗೆ ಸೋಂಕು ತಗುಲಿದ್ದರಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 9 ಗಂಟೆಗೆ ಪತ್ನಿ ಭೇಟಿಯಾಗಲು ಮುತ್ತುರಾಜ್ ಆಗಮಿಸಿದ್ದರು. ಈ ವೇಳೆ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಅದೃಷ್ಟವಶಾತ್ ಮುತ್ತುರಾಜ್ ಮೇಲಿಂದ ಬೀಳುವಾಗ ಕೆಳ ಮಹಡಿಯ ಬಳಿಯಿದ್ದ ಗ್ಯಾಲರಿಗೆ ತಾಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೈ ಮತ್ತು ಕಾಲಿಗೆ ಗಾಯಗಳಾಗಿವೆ. ತಕ್ಷಣ ಅಲ್ಲಿದ್ದ ಅಟೆಂಡರ್ ಗಾಯಾಳು ಮುತ್ತುರಾಜ್ ನನ್ನು ತುರ್ತು ಚಿಕಿತ್ಸಾ ವಾರ್ಡಿಗೆ ಕರೆತಂದು ಚಿಕಿತ್ಸೆ ನೀಡಿದ್ದಾರೆ. ಆತ್ಮಹತ್ಯೆ ಯತ್ನಿಸಲು ಕಾರಣ ಏನು ಅನ್ನೋ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದರೆ. ಘಟನೆಯ ಕುರಿತು ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ