Breaking News

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

Spread the love

ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಪಣಜಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಮುನ್ನ ಗೋವಾ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಪ್ರತಿಪಕ್ಷಗಳನ್ನು ಕಠುವಾಗಿ ಟೀಕಿಸಿದರು.

. ಫಡ್ನವೀಸ್ ನೇರವಾಗಿ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ರೂಪಿಸಿದ ಯೋಜನೆಗಳಿಂದ ದೆಹಲಿಯಲ್ಲಿ ಪ್ರತಿ ಮನೆಗೂ ನೀರು ಪೂರೈಕೆಯಾಗುವಂತಾಗಿದೆ. ಇದರಿಲ್ಲಿ ಆಮ್ ಆದ್ಮಿ ಪಕ್ಷದ ಯಾವುದೇ ಪಾತ್ರವಿಲ್ಲ. ಇದರಿಂದಾಗಿ ಆಮ್ ಆದ್ಮಿ ಪಕ್ಷ ಗೋವಾಕ್ಕೆ ಬಂದು ಯಾವುದೇ ಭರವಸೆ ನೀಡಿದರೂ ಕೂಡ ಸತ್ಯ ಏನು ಎಂಬುದು ರಾಜ್ಯದ ಜನತೆಗೆ ತಿಳಿದಿದೆ. ಗೋವಾದಲ್ಲಿ ಬಿಜೆಪಿಯು ಉತ್ತಮ ಅಭಿವೃದ್ಧಿ ಕಾರ್ಯ ಕೈಗೊಂಡಿದೆ. ದಿ. ಮನೋಹರ್ ಪರ್ರಿಕರ್ ರವರು ಕೂಡ ಗೋವಾದಲ್ಲಿ ಬಿಜೆಪಿ ಮಾಧ್ಯಮದ ಮೂಲಕ ಉತ್ತಮ ಅಭಿವೃದ್ಧಿ ಕೈಗೊಂಡಿದ್ದಾರೆ ಎಂದರು.

ಬಿಜೆಪಿಯು ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದರಲ್ಲಿ ಪ್ರಮುಖವಾಗಿ ಸಾಖಳಿ ಕ್ಷೇತ್ರದಲ್ಲಿ ಹಾಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸ್ಫರ್ಧಿಸಲಿದ್ದಾರೆ. ಪಣಜಿ ಕ್ಷೇತ್ರದಲ್ಲಿ ದಿ.ಮನೋಹರ್ ಪರೀಕರ್ ಪುತ್ರ ಉತ್ಪಲ್ ರವರನ್ನು ಕೈಬಿಡಲಾಗಿದ್ದು ಹಾಲಿ ಶಾಸಕ ಬಾಬೂಶ್ ಮೊನ್ಸೆರಾತ್ ರವರಿಗೆ ಬಿಜೆಪಿ ಟಿಕೆಟ್ ನೀಡಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ