Breaking News

ಬಿಜೆಪಿ ಶಾಸಕನ ಮೇಲೆ ಬಿತ್ತು ಕೇಸ್​..

Spread the love

ಬೆಳಗಾವಿ: ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೊನೆಗೂ ಕೇಸ್ ದಾಖಲಾಗಿದೆ.

ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಡೆದ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಭಾಗವಹಿಸಿದ್ದ ಶಾಸಕರು ಕೋವಿಡ್​ ನಿಯಮಗಳಿಗೆ ಗೋಲಿ ಹೊಡೆದಿದ್ದರು. ಸರ್ಕಾರದ ಕಟ್ಟುನಿಟ್ಟಿನ ಆದೇಶವಿದ್ದರು ಶಾಸಕರು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನದೆ ಸಾಕಷ್ಟು ಜನ ಜಮಾವಣೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೆ ಎಮ್ಮೆ ಓಡಿಸುವ ಬಹಿರಂಗ ಕಾರ್ಯಕ್ರಮಕ್ಕು ಚಾಲನೆ ನೀಡಿದ್ದರು.

 

ಈ ವೇಳೆ ಅಲ್ಲಿ ಜನರು ಯಾವುದೇ ಕೋವಿಡ್​ ನಿಯಮಗಳನ್ನು ಪಾಲಿಸದೆ ಸಂಪೂರ್ಣವಾಗಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದರು. ಇನ್ನು ಇಂತಹ ಕಾರ್ಯಕ್ರಮದಲ್ಲಿ ಶಾಸಕರೇ ಸ್ವತಃ ಭಾಗವಹಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಇತ್ತ ವಿರೋಧ ಪಕ್ಷದವರು ಕೂಡ ಕೇಸ್​ ದಾಖಲಿಸುವಂತೆ ವಾಗ್ದಾಳಿ ನಡೆಸಿದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಬೆಳಗಾವಿ ಕ್ಯಾಂಪ್​ ಪೊಲೀಸರು​ ಅನಿಲ್​ ಬೆನಕೆ ವಿರುದ್ಧ ‘ಕರ್ನಾಟಕ ಸಾಂಕ್ರಾಮಿಕ ರೋಗ ತಡೆ’ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಸ್ಪರ್ಧೆ ಆಯೋಜಕರ ವಿರುದ್ಧವೂ ಕೇಸ್​ ಜಡಿಯಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ