ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಇಂದು ಗುರುವಾರ ಬೆಳಗಿನ ಜಾವ ಕಳ್ಳರು ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚಿಂಚೋಳಿ ಮತ್ತು ತಾಂತ್ರಿಕ ಮುಖ್ಯರಸ್ತೆಯಲ್ಲಿರುವ ಎಂಆರ್ ಎಫ್ ಟೈರ್ಸ್ ಮತ್ತು ಮಾನಸ ಸಿಮೆಂಟ್ ಅಂಗಡಿಗೆ ನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ಅನ್ನು ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ.
ಕಂಪನಿಯ ಅಂಗಡಿಗೆ ನುಗ್ಗಿದ ಕಳ್ಳರು ಶೆಟರ್ ಕೀಲಿ ಮುರಿದು ಒಳಗೆ ನುಗ್ಗಿದ ಕಳ್ಳರು ಟೈರ್ ಮತ್ತು ಟ್ಯೂಬುಗಳನ್ನು ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪಿಎಸ್ ಐ ಮಂಜುನಾಥ್ ರೆಡ್ಡಿ ಶ್ವಾನದಳದೊಂದಿಗೆ ಭೇಟಿ ನೀಡಿ ಕಳ್ಳರ ಪತ್ತೆಗಾಗಿ ಶೋಧನಾ ಕಾರ್ಯ ನಡೆಸುತ್ತಿದ್ದಾರೆ.
ಚಿಂಚೋಳಿ ಪಟ್ಟಣದಲ್ಲಿ ಇತ್ತೀಚೆಗೆ ಕಳ್ಳರ ಹಾವಳಿ ಮಿತಿ ಮೀರಿದ್ದು ಸಾರ್ವಜನಿಕರು ಆತಂಕವನ್ನುಂಟು ಮಾಡಿದೆ.