ದಾವಣಗೆರೆ: ಕೊರೊನಾ ಸೋಂಕು ತಗುಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಗಣಪತಿ ಹಬ್ಬ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಕೋವಿಡ್ ಕೇಸ್ ಸೆಂಟರ್ ನಲ್ಲಿ ಗಣಪತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ.
ದಾವಣಗೆರೆಯ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿರುವ ಕೋವಿಡ್ ಕೇರ್ ಸೆಂಟರಿನಲ್ಲಿ 150ಕ್ಕೂ ಹೆಚ್ಚು ಪಾಸಿಟಿವ್ ಬಂದಿರುವ ಜನರಿದ್ದು, ರೇಣುಕಾಚಾರ್ಯ ಕುಟುಂಬದ ಹಾಗೂ ಆಪ್ತರ ಜೊತೆ ಸೇರಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಹೋಳಿಗೆ ಊಟ ನೀಡಿದ್ದಾರೆ.
ಸ್ವತಃ ಶಾಸಕರೇ ತೆರಳಿ ಹೋಳಿಗೆ ಮಾಡಿ ಅಲ್ಲಿರುವ ಸಿಬ್ಬಂದಿಗೆ ಹಾಗೂ ಸೋಂಕಿತರಿಗೆ ಬಡಿಸಿದ್ದಾರೆ. ಅಲ್ಲದೆ ಅಲ್ಲಿರುವ ಸೋಂಕಿತರಿಗೆ ಧೈರ್ಯ ತುಂಬಿ ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದರು. ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡಿದ್ದ ಹಿನ್ನೆಲೆಯಲ್ಲಿ ಅಂತಹ ಮನೆಗಳಿಗೆ ರೇಷನ್ ಕಿಟ್ ನೀಡುವ ಮೂಲಕ ಕೊರೊನಾ ವಿರುದ್ಧ ಹೋರಾಟ ಮಾಡಬೇಕು ಎಂದು ಗ್ರಾಮಸ್ಥರಿಗೆ ಪ್ರತಿನಿತ್ಯ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.