Breaking News
Home / ರಾಜಕೀಯ / ಸಿದ್ದುಗೆ ಹೈಕಮಾಂಡ್ ಟಕ್ಕರ್

ಸಿದ್ದುಗೆ ಹೈಕಮಾಂಡ್ ಟಕ್ಕರ್

Spread the love

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಹಿರಿಯ ನಾಯಕ‌ ಬಿ.ಕೆ.ಹರಿಪ್ರಸಾದ್ ನೇಮಕ ಈಗ ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗುತ್ತಿದ್ದು, ಮಾಜಿ ಸಿಎಂ‌ ಸಿದ್ದರಾಮಯ್ಯ ಅವರಿಗೆ ಟಕರ್ ನೀಡುವುದಕ್ಕಾಗಿಯೇ ಈ‌ ನೇಮಕ ನಡೆದಿದೆ ಎಂಬ ಮಾತು ಕೇಳಿ ಬಂದಿದೆ.

 

ಎಐಸಿಸಿಯಲ್ಲಿ ಸುದೀರ್ಘ ಕಾಲ ಕರ್ತವ್ಯ ನಿರ್ವಹಿಸಿರುವ ಹರಿಪ್ರಸಾದ್ ದಿಲ್ಲಿ ಅಂಗಣದಲ್ಲಿ ಪಳಗಿದ ರಾಜಕಾರಣಿ. ಕಾಂಗ್ರೆಸ್ ವರಿಷ್ಠರ ಜತೆಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಆದರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜತೆ ಸಮಾನ ಅಂತರ ಕಾಯ್ದುಕೊಂಡಿರುವ ಅವರು ಮೂಲ ಕಾಂಗ್ರೆಸ್ ತಟಸ್ಥ ಬಣದಲ್ಲಿ ಗುರುತಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ನಡೆ ಬಗ್ಗೆ ಸಾಕಷ್ಟು ಅಸಮಾಧಾನ ಹೊಂದಿರುವ ಹರಿಪ್ರಸಾದ್ ಪಕ್ಷದ ವೇದಿಕೆಯಲ್ಲಿ ಮಾತ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಮೂಲ‌ ಕಾಂಗ್ರೆಸಿಗರಾದ ಮಲ್ಲಿಕಾರ್ಜುನ‌ ಖರ್ಗೆ, ಜಿ.ಪರಮೇಶ್ವರ, ಎಚ್.ಕೆ.ಪಾಟೀಲ್, ಜಿ.ಸಿ.ಚಂದ್ರಶೇಖರ್ ಮೊದಲಾದವರ ಜತೆ ಆತ್ಮೀಯ ಸಂಬಂಧ ಹೊಂದಿರುವ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ವಿದ್ಯಾರ್ಥಿ ಹೋರಾಟ ಕಾಲದಿಂದಲೂ ಸಂಪರ್ಕ ಹೊಂದಿದ್ದಾರೆ. ಸಿದ್ದರಾಮಯ್ಯ ವೇಗಕ್ಕೆ ತಡೆ ಹಾಕುವುದಕ್ಕಾಗಿ ಮೇಲ್ಮನೆಯಲ್ಲೂ ಹಿಂದುಳಿದ ವರ್ಗದ ನಾಯಕನಿಗೇ ಈಗ ರಾಜ್ಯ ಕಾಂಗ್ರೆಸ್ ನಾಯಕರೆಲ್ಲ ಸೇರಿ ಪಟ್ಟಕಟ್ಟಿದ್ದಾರೆ ಎಂಬ ಮಾತುಗಳು‌ ಕೇಳಿ ಬಂದಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ