ಬಳ್ಳಾರಿ: ಯುಪಿಎಸ್‍ಸಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವ ನಂದಿನಿ ಕೆ.ಆರ್. ಅವರು ಇಂದು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಮೂಲತಃ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದವರಾದ ನಂದಿನಿ ಅವರು, 2016ರ ಬ್ಯಾಚ್‍ನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಉತ್ತೀಣರಾಗಿದ್ದರು. ಈ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು. ಕಡುಬಡತನದ ಹಿನ್ನೆಲೆಯಲ್ಲಿ ಬಂದ ನಂದಿನಿ ಅವರು ಇದೀಗ ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರೋದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ.
ಐಎಎಸ್ ಪರೀಕ್ಷೆಯಲ್ಲಿ ಟಾಪರ್ ಆಗಿ ಆಯ್ಕೆಯಾಗಿರುವ ನಂದಿನಿ ಅವರಿಗೆ ಮುಂಚೂಣಿಯಾಗಿ ಸಿಇಒ ಹುದ್ದೆಯನ್ನ ಅಲಂಕರಿಸಲು ಬಳ್ಳಾರಿ ಜಿಲ್ಲಾ ಪಂಚಾಯಿತಿ ಒಂದು ರೀತಿಯ ಸ್ಫೂರ್ತಿದಾಯಕವಾಗಿದೆ. ಈ ಹಿಂದೆ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕೆ.ನಿತೀಶ್ ಅವರು ಆಯ್ಕೆಯಾಗಿದ್ದರು. ನಿತೀಶ್ ಅವರ ಹಿಂದೆ ಸಿಇಓ ಆಗಿ ಆಯ್ಕೆಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಅವರ ಕಾರ್ಯವೈಖರಿ ಜನಮನ್ನಣೆ ಗಳಿಸಿತ್ತು. ಇದೀಗ ನಂದಿನಿ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.