Breaking News

ವಾರದಲ್ಲಿ 5 ದಿನ ಆದೇಶ ವಾಪಾಸ್ ಪಡೆದ ರಾಜ್ಯ ಸರ್ಕಾರ: ಇನ್ಮುಂದೆ ಶನಿವಾರವೂ ಸರ್ಕಾರಿ ನೌಕರಿಗೆ ಕೆಲಸ

Spread the love

ಬೆಂಗಳೂರು: ಕೊರೋನಾ ಸೋಂಕಿನ ( Coronavirus ) ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ( Weekend Curfew ) ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ( Government Employees ) ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ( Holiday ) ಮಾಡಲಾಗಿತ್ತು.

ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ

Spread the loveಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್​ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ