Breaking News

18 ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು,ಶಾಲೆ ಸೀಲ್ ಡೌನ್ !

Spread the love

ಧಾರವಾಡ: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದ ಶಾಲೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು ಕಾಣಿಸಿಕೊಂಡಿದೆ.ಇಲ್ಲಿನ ನೆಹರು ಸಂಯುಕ್ತ ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿನ ಇಬ್ಬರು ವಿದ್ಯಾರ್ಥಿಗಳಿಗೆ ಜನವರಿ 24 ರಂದು ಸೋಂಕು ಕಾಣಿಸಿಕೊಂಡಿತ್ತು.ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಹೆಬ್ಬಳ್ಳಿ ಶಾಲೆಯನ್ನು ಸೀಲ್ ಡೌನ್ ಮಾಡಿದೆ.

 

ಬಳಿಕ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಿದಾಗ ಒಟ್ಟಾರೇ 18 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಇದರಿಂದ ಗ್ರಾಮದಲ್ಲಿ ಆತಂಕ ಹೆಚ್ಚಿದೆ.

18 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಾಕಿ ಇರುವ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಾಗಿದ್ದು, ಇಂದು ವರದಿ ಬರುವ ಸಾಧ್ಯತೆಯಿದೆ.

 ಫೆಬ್ರವರಿ 2 ರವರೆಗೆ ಶಾಲೆಗೆ ರಜೆ ನೀಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ