Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ದನಗೌಡ ಪಾಟೀಲ ನಿಧನ

ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ದನಗೌಡ ಪಾಟೀಲ ನಿಧನ

Spread the love

ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ದನಗೌಡ ಪಾಟೀಲ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಬೆಳಗಾವಿಯ ಎಲ್ಲ ಕನ್ನಡ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದ ಸಿದ್ದನಗೌಡ ಪಾಟೀಲ, ಹಲವಾರು ಸಾಮಾಜಿಕ ಸಂಘಟನೆಗಳಲ್ಲೂ ತೊಡಗಿಕೊಂಡಿದ್ದರು.

ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಬಂದಿದ್ದವು.

 

ಇಂದು ಮಧ್ಯಾಹ್ನ 2 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಸಮೀಪದ ಮಲ್ಲಾಪುರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಬೆಳಗಾವಿಯ ಪ್ರಥಮ ಕನ್ನಡ
ಮಹಾಪೌರ ಸಿದ್ದನಗೌಡ ಪಾಟೀಲ
ಇನ್ನಿಲ್ಲ: ಗಡಿ ಹೋರಾಟಕ್ಕೆತುಂಬಲಾರದ ನಷ್ಟಬೆಳಗಾವಿಯ ಗಡಿ ಹೋರಾಟದಕೊಂಡಿಯೊಂದು ಇಂದು ಬುಧವಾರಕಳಚಿತು! ತುಂಬಲಾರದ ಹಾನಿಬೆಳಗಾವಿಗಾಯಿತು.ಪ್ರಥಮ ಕನ್ನಡ
ಮಹಾಪೌರ ಸಿದ್ದನಗೌಡ ಪಾಟೀಲರುಇಂದು ತಮ್ಮ 87 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಳಗಾವಿಯ ಶಿವಬಸವನಗರದತಮ್ಮ ನಿವಾಸದಲ್ಲಿ ಅವರು ಬುಧವಾರಮಧ್ಯಾನ್ಹ 12 ಗಂಟೆಗೆ ನಿಧನಹೊಂದಿದ್ದಾರೆ.
ಅವರು ತಮ್ಮ ಹಿಂದೆ ಪತ್ನಿ,ದತ್ತು ಪುತ್ರ
ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.ಬುಧವಾರ ಮಧ್ಯಾನ್ಹ 3 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಬಳಿಯ ಮಲ್ಲಾಪೂರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಪರಿಚಯ:
1956 ರಿಂದಲೂ ಕನ್ನಡ ಹೋರಾಟದ ಮುಂಚೂಣಿಯಲ್ಲಿದ್ದ ಅವರು 1984 ರಲ್ಲಿ ಬೆಳಗಾವಿ ಪಾಲಿಕೆಯ ಸದಸ್ಯರಾಗಿ ಆಯ್ಕೆಯಾದರು.1990 ರಲ್ಲಿ ಮತ್ತೆ ಪುನರಾಯ್ಕೆಗೊಂಡರು.1991 ರಲ್ಲಿ ಪ್ರಥಮ ಕನ್ನಡ ಮಹಾಪೌರರಾಗಿ ಆಯ್ಕೆಗೊಂಡರು.
ಬೆಳಗಾವಿ ಡಿ.ಸಿ.ಸಿ.ಬ್ಯಾಂಕಿನ ನಿರ್ದೇಶಕರಾಗಿ ಮೂರು ಅವಧಿಗಳವರೆಗೆ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಗ್ರಾಹಕರ ಮಹಾಮಂಡಳಿಯ ನಿರ್ದೇಶಕರಾಗಿ 20 ವರ್ಷ ಸೇವೆ ಸಲ್ಲಿಸಿದ್ದರು.ಎರಡೂವರೆ ವರ್ಷಗಳ ಕಾಲ ಮಹಾಮಂಡಳದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ನಾಡು,ನುಡಿ,ಗಡಿ ಹೋರಾಟಗಳ ಮುಂಚೂಣಿಯಲ್ಲಿದ್ದ ಅವರು ಇತ್ತೀಚಿನವರೆಗೂ ಹೋರಾಟಗಳಲ್ಲಿ ಭಾಗವಹಿಸುತ್ತಲೇ ಬಂದಿದ್ದರು.
ನಿಧನದ ಸುದ್ದಿ ಕೇಳುತ್ತಲೇ ಅವರ ನಿವಾಸಕ್ಕೆ ಧಾವಿಸಿದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ,ಹಿರಿಯ ಹೋರಾಟಗಾರ ರಾಘವೇಂದ್ರ ಜೋಶಿ ಅವರು ಬೆಳಗಾವಿಯ ಕನ್ನಡ ಸಂಘಟನೆಗಳ ಪರವಾಗಿ ಅಂತಿಮ ನಮನ ಸಲ್ಲಿಸಿದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ