ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯ ಮೀಸಲಾತಿಯನ್ನು ಬದಲಾಯಿಸಿ ಹೊಸ ಆದೇಶ ಹೊರಡಿಸಿದ ಬೆನ್ನಲ್ಲೇ ಗುರುವಾರ ಪ್ರಾದೇಶಿಕ ಆಯುಕ್ತರು ಫೆಬ್ರುವರಿ 5ರಂದು ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದ್ದಾರೆ.
ಫೆ 5ರಂದು ಬೆಳಿಗ್ಗೆ 10.30ಕ್ಕೆ ನಾಮಪತ್ರವನ್ನು ಉಪ ವಿಭಾಗಾಧಿಕಾರಿಗೆ ಸಲ್ಲಿಸಬೇಕು. ಮಧ್ಯಾಹ್ನ 12ರ ಮತದಾನ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ್ ತಿಳಿಸಿದ್ದಾರೆ.
ಚುನಾವಣೆ ನಡೆಯುತ್ತಿದ್ದಂತೆಯೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಾಳೆಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಾಲಿಕೆ ಚುನಾವಣೆಯಲ್ಲಿ 27 ಸ್ಥಾನಗಳನ್ನು ಗಳಿಸಿದ್ದು, ಜೆಡಿಎಸ್ ಬೆಂಬಲ ಕೋರಿದೆ. ಬಿಜೆಪಿ ಸಹ ಜೆಡಿಎಸ್ ಮುಖಂಡರನ್ನು ಸಂಪರ್ಕಿಸಿದ್ದು, ಒಂದೊಮ್ಮೆ ಜೆಡಿಎಸ್ ಕೈಕೊಟ್ಟರೂ ಅಧಿಕಾರಕ್ಕೆ ಬರಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ತನ್ನ ಏಳು ಜನ ವಿಧಾನಪರಿಷತ್ ಸದಸ್ಯರನ್ನು ಹೆಸರುಗಳನ್ನು ಸ್ಥಳೀಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಸಲು ಯತ್ನಿಸುತ್ತಿದೆ.
Laxmi News 24×7