ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡಿದೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ, ಸಿಎಂ ಪುತ್ರ ವಿಜಯೇಂದ್ರ ಅವರು ಎಲ್ಲಾ ಇಲಾಖೆಗಳಲ್ಲೂ ಉಸ್ತುವಾರಿಗಳನ್ನು ಮಾಡಿಕೊಂಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಇದಕ್ಕಾಗಿ 31 ಜನರ ಗುಂಪು ಕಟ್ಟಿಕೊಂಡಿದ್ದಾರೆ. ಈ 31 ಜನರ ಚಲನವಲನಗಳನ್ನು ಗಮನಿಸಿದ್ದೇದ್ದು, ಎಲ್ಲ ದಾಖಲೆಗಳನ್ನು ಸಂಗ್ರಹಿಸಿದ್ದೇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ವಿಜಯೇಂದ್ರ ಅವರು ವರ್ಗಾವಣೆ ದಂಧೆಯಲ್ಲಿ ಕೋಟಿಗಟ್ಟಲೆ ಲೂಟಿ ಮಾಡಿರುವ ಬಗ್ಗೆ ದಾಖಲೆಗಳಿದ್ದು, ಈ ದಾಖಲೆಗಳನ್ನು ಸೆಪ್ಟೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
Laxmi News 24×7