Breaking News

ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕನ ವಿರುದ್ದ ರೇಪ್ ಕೇಸ್..!

Spread the love

ಬೆಂಗಳೂರು: ಮದುವೆಯಾಗುತ್ತೇನೆಂದು ನಂಬಿಸಿ ನಟಿಯೊಬ್ಬರಿಗೆ ವಂಚನೆ ಮಾಡಿರುವ ಆರೋಪದಡಿ ಸ್ಯಾಂಡಲ್ ವುಡ್ ನಟ ಹಾಗೂ ನಿರ್ಮಾಪಕನನ್ನು ಬಂಧಿಸಲಾಗಿದೆ. ವಿಷನ್​ 2023′ ಎಂಬ ಸಿನಿಮಾದ ಹೀರೋ ಕಮ್​ ನಿರ್ಮಾಪಕ ಆಗಿರುವ ಹರ್ಷವರ್ಧನ್ ಟಿ.ಜಿ.

ಅಲಿಯಾಸ್​ ವಿಜಯ ಭಾರ್ಗವ್​ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ರೇಪ್ ಕೇಸ್ ದಾಖಲಾಗಿದ್ದು, ನಟಿಯ ದೂರಿನ ಅನ್ವಯ ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿದೆ. ಕಳೆದ ಎರಡು ವರ್ಷಗಳಿಂದಲೂ ತಮಗೆ ಮೋಸ ಮಾಡಲಾಗಿದೆ ಎಂದು ದೂರಿನಲ್ಲಿ ಸಂತ್ರಸ್ತ ನಟಿ ತಿಳಿಸಿದ್ದಾರೆ.

ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರ ಮಾಡುತ್ತಿದ್ದ ಈ ಮಹಿಳೆಗೆ ಹರ್ಷವರ್ಧನ್​ ಪ್ರೀತಿ ಪ್ರೇಮದ ಬಲೆ ಬೀಸಿದ್ದರು. ‘ನೀನೇ ನನ್ನ ಹೆಂಡತಿ ಎಂದು ಹೇಳಿ ನಂಬಿಸಿದ್ದರು. ಕಳೆದ 2 ವರ್ಷಗಳಿಂದ ನನ್ನನ್ನು ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಮದುವೆ ಮಾಡಿ ಕೊಳ್ಳುತ್ತೇನೆ ಎಂದು ಭರವಸೆ ನೀಡಿ ಮೋಸ ಮಾಡಿದ್ದಾರೆ.

ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಅಲ್ಲದೆ, ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದರು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆ ನಟಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ