ಬೆಳಗಾವಿ: ಪೀರನವಾಡಿಯ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೊಳಿಸುವಂತೆ ಒತ್ತಾಯಿಸಿ ರಾಯಣ್ಣನ ಅಭಿಮಾನಿಗಳು ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಳಗಾವಿ ಆಗಮಿಸುವ ಸಾವಿರಾರು ರಾಯಣ್ಣನ ಅಭಿಮಾನಿಗಳು ಸುವರ್ಣಸೌಧದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಲಿದ್ದಾರೆ. ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹಿಸಲಿದ್ದಾರೆ.
ಕನ್ನಡ ಹೋರಾಟಗಾರರು, ರಾಯಣ್ಣ ಅಭಿಮಾನಿಗಳು ಹಲವು ಬಾರಿ ಪ್ರತಿಭಟನೆ ಕೈಗೊಂಡು ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಬೇಕೆಂದು ಜಿಲ್ಲಾಡಳಿತ, ಸಿಎಂ ಅವರಿಗೂ ಮನವಿ ಸಲ್ಲಿಸಿದ್ದಾರೆ. ಆದರೆ ಯಾವುದೇ ರೀತಿ ಕ್ರಮ ಕೈಗೊಳ್ಳದೆ ಇರುವ ಹಿನ್ನೆಲೆಯಲ್ಲಿ ನಾಳೆ ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ.
ನಾಳೆ ಪೀರನವಾಡಿ ವಿವಾದ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಹೊಸ ಆಯಾಮ ನೀಡಲಿದೆ.