Breaking News

ಕಾರು-ಲಾರಿ ಭೀಕರ ಅಪಘಾತ: ಕಾರಲ್ಲಿದ್ದ ಸೈನಿಕ ಸ್ಥಳದಲ್ಲೇ ಸಾವು.

Spread the love

ಧಾರವಾಡ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸೈನಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಧಾರವಾಡ ಹೊರವಲಯದ ಯರಿಕೊಪ್ಪ‌ ಬೈಪಾಸ್ ಬಳಿ ಉಂಟಾದ ಈ ಅಪಘಾತದಲ್ಲಿ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಹೈದರಾಬಾದ್​ ಆರ್ಮಿ ಸೆಂಟರ್​ನಲ್ಲಿ ನಾಯಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಸಂತರಾಜ್ (45) ಮೃತಪಟ್ಟ ಸೈನಿಕ.

ಇವರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೂದಿಹಾಳ ಗ್ರಾಮದ ನಿವಾಸಿ.

ಇಂದು ಬೆಂಗಳೂರಿನಿಂದ ಇವರು ತಮ್ಮ ಊರಾದ ಬೆಳಗಾವಿಗೆ ಹೋಗುತ್ತಿದ್ದಾಗ ಧಾರವಾಡ ಹೊರವಲಯದ ಯರಿಕೊಪ್ಪ‌ ಬೈಪಾಸ್ ಬಳಿ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ವಸಂತರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಉಂಟಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ