ತಿರುವನಂತಪುರ: ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಪ್ರತಿಜ್ಞೆ ಮಾಡೋಣ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ‘ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ಶಕ್ತಿಗಳೇ ಧರ್ಮದ ಹೆಸರಿನಲ್ಲಿ ಇಂದಿಗೂ ಜನರನ್ನು ಹತ್ಯೆ ಮಾಡುತ್ತಿವೆ.
ಅವರು ಇಂದು ನಮ್ಮ ದೇಶಕ್ಕೆ ದೊಡ್ಡ ಬೆದರಿಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.
https://twitter.com/vijayanpinarayi/status/1487634444844355584/photo/1?ref_src=twsrc%5Etfw%7Ctwcamp%5Etweetembed%7Ctwterm%5E1487634444844355584%7Ctwgr%5E%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada
‘ಗಾಂಧೀಜಿಯವರ ನೆನಪು ಹಿಂದೆಂದಿಗಿಂತಲೂ ಈಗ ಪ್ರಸ್ತುತವಾಗಿದೆ. ಹುತಾತ್ಮರ ದಿನದಂದು, ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಪ್ರತಿಜ್ಞೆ ಮಾಡೋಣ’ ಎಂದೂ ಪಿಣರಾಯಿ ಹೇಳಿದ್ದಾರೆ.
ಜ.30ರಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಭಾರತದ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರ ಸ್ಮರಣೆಗಾಗಿ ದೇಶದಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.