Breaking News

ಬದುಕಿರುವ ರೈತನಿಗೆ ಮರಣ ಪ್ರಮಾಣ‌ ಪತ್ರ

Spread the love

ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ‌ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ತಹಸೀಲ್ದಾರ್​ ಸೇರಿದಂತೆ‌ ನಾಲ್ವರು ಅಧಿಕಾರಗಳ ಎಫ್​ಐಆರ್ ದಾಖಲಿಸಲಾಗಿದೆ.

ರೈತ ಶಿವರಾಜ್ (40) ಎಂಬ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿರುವ ಅಧಿಕಾರಿಗಳು.

ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್, ಪಡಿತರ ಪಡೆಯಲು ಹೋದ ವೇಳೆ ತಮ್ಮ ಹೆಸರು ಇಲ್ಲದಿರುವುದು ಮತ್ತು ಮೃತಪಟ್ಟಿರುವುದಾಗಿ ದಾಖಲಾಗಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದರು.

ಬಳಿಕ ಈ ಬಗ್ಗೆ ವಿಚಾರಿಸಿದಾಗ ಹಿಂದಿನ ತಹಸೀಲ್ದಾರ್​ ಜಿ. ರಾಜಶೇಖರ್, ಗ್ರಾಮ ಲೆಕ್ಕಿಗ ಅರವಿಂದ, ಕಂದಾಯ ನಿರೀಕ್ಷಿಕ ಸಾದತ್ ವುಲ್ಲಾ ಖಾನ್, ನಾಡಕಚೇರಿ ಶಿರೇಸ್ತೆದಾರ್ ಜಯರಾಂ ಕೃತ್ಯ ಎಂಬುದು ಬಹಿರಂಗವಾಗಿದ್ದು, ಅಧಿಕಾರಿಗಳ ವಿರುದ್ಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದು ಅಧಿಕಾರಿಗಳು ಮಾಡಿದ ಎಡವಟ್ ಅಥವಾ ಉದ್ದೇಶಪೂರ್ವಕವಾಗಿಯೇ ಮಾಡಿದ ಕೃತ್ಯವಾ ಎಂದು ತನಿಖೆಯಿಂದ ತಿಳಿದುಬರಬೇಕಿದೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ