Breaking News

ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಕೈಕೊಟ್ಟ ಪೊಲೀಸ್​ ಕಾನ್ಸ್​ಟೇಬಲ್​

Spread the love

ಮೈಸೂರು: ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬ ಯುವತಿಗೆ ಕೈಕೊಟ್ಟಿರುವ ಘಟನೆ ನಡೆದಿದ್ದು, ಮೋಸ ಹೋದ ಯುವತಿ ನ್ಯಾಯಕ್ಕಾಗಿ ತಿ.ನರಸೀಪುರ ಪೋಲೀಸ್ ಠಾಣೆಯ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾಳೆ.

 

ತಿ.ನರಸೀಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್​ಟೇಬಲ್​ ರವಿ ವಿರುದ್ಧ ಆರೋಪ ಕೇಳಿಬಂದಿದೆ. ಅನ್ಯಾಯಕ್ಕೆ ಒಳಗಾದ ಯುವತಿ ಬೆಂಗಳೂರಿನ ನಿವಾಸಿಯಾಗಿದ್ದು, 2018ರಲ್ಲಿ ಫೇಸ್​ಬುಕ್​ ಮೂಲಕ ಇಬ್ಬರ ನಡುವೆ ಸ್ನೇಹ ಶುರುವಾಗಿತ್ತು. ಬಳಿಕ ಸ್ನೇಹ ಪ್ರೇಮಕ್ಕೆ ತಿರುಗಿತ್ತು.

ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ನನ್ನನ್ನು ಬಳಸಿಕೊಂಡಿದ್ದಾನೆಂದು ಸಂತ್ರಸ್ತ ಯುವತಿ ಗಂಭೀರ ಆರೋಪ ಮಾಡಿದ್ದು, ನ್ಯಾಯಕ್ಕಾಗಿ ತಿ.ನರಸೀಪುರ ಪೋಲೀಸ್ ಠಾಣೆಯ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾಳೆ. ವಂಚನೆ ಸಂಬಂಧ ಯುವತಿ ಈಗಾಗಲೇ ದೂರು ಸಹ ನೀಡಿದ್ದಾಳೆ. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ