Breaking News

ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

Spread the love

ಬೆಂಗಳೂರು : ವಿದ್ಯಾರ್ಥಿ ವೇತನ, ಹಾಸ್ಟೆಲ್, ಮೌಲ್ಯಮಾಪನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಬಿವಿಪಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.

 

ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಅಲ್ಲದೇ, ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆಯೂ ಜಗಳ ನಡೆದಿದ್ದು, ಇಲ್ಲಿಯ ವಿಶ್ವವಿದ್ಯಾಲಯದಲ್ಲಿ ಬಿಬಿಎಂಪಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳ ಆರಂಭವಾಗಿದೆ.

ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ವಿಷಯ, ಮೌಲ್ಯಮಾಪನ, ಹಾಸ್ಟೆಲ್ ಸಮಸ್ಯೆ, ಶಿಷ್ಯವೇತನ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತಿಭಟನೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಈ ವಿಷಯವಾಗಿ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಸಂಶೋಧನಾ ವಿದ್ಯಾರ್ಥಿಗಳು, ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ