Breaking News

ಸದೃಢ ಕರ್ನಾಟಕ ಕಟ್ಟಲು 24×7 ಕೆಲಸ: ಬೊಮ್ಮಾಯಿ

Spread the love

ಸದೃಢ ಕರ್ನಾಟಕ ಕಟ್ಟಲು 24 ತಾಸುಗಳ ಕಾಲ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸರಕಾರ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಇಂದು ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

 

ಪ್ರಾದೇಶಿಕ ಅಸಮತೋಲನ ನಿವಾರಣೆ :
ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿಗಾಗಿ ₹ 1500 ಕೋಟಿ ಖರ್ಚು ಮಾಡಿದರೆ ಮುಂದಿನ ವರ್ಷದಲ್ಲಿ ₹ 3000 ಕೋಟಿಗಳ ಅನುದಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. 14,000 ಹುದ್ದೆಗಳಿಗೆ ಆರ್ಥಿಕ ಮಂಜೂರಾತಿ ನೀಡಲಾಗಿದೆ ಎಂದರು.

ಸ್ಪಂದನಾಶೀಲ, ಸರ್ವಸ್ಪರ್ಶಿ ಸರಕಾರ:
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಸತಿ ಯೋಜನೆಗಳ ಬಾಕಿ ಇದ್ದ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಆರು ತಿಂಗಳಲ್ಲಿ ಹಲವಾರು ನಿರ್ಣಯಗಳಾಗಿವೆ.
ವಸ್ತುಸ್ಥಿತಿಯನ್ನು ಜನರ ಮುಂದಿಡುವ ಸಂದರ್ಭವಿದು. ಜನರ ಪರವಾಗಿ ಕೆಲಸಮಾಡುವ ಸರಕಾರ ಬಂದಿದೆ ಎಂದು ಜನರು ಹರಸುತ್ತಾರೆ. ಸ್ಪಂದನಾಶೀಲ, ಸರ್ವಸ್ಪರ್ಶಿ ಸರಕಾರವಾಗಿದ್ದು, ಕಟ್ಟಕಡೆಯ ವ್ಯಕ್ತಿಯ ಸ್ಥಾನದಲ್ಲಿ ಕುಳಿತು ಯೋಚಿಸುತ್ತಿದ್ದೇವೆ. ಅಭಿವೃದ್ಧಿಯಾಗಲು ಕಾನೂನು ಸುವ್ಯವಸ್ಥೆಯನ್ನು ಉತ್ತಮವಾಗಿರಬೇಕು. ಪೊಲೀಸ್ ಇಲಾಖೆ ಇದನ್ನು ಅತ್ಯುತ್ತಮವಾಗಿ ಮಾಡಿದ್ದಾರೆ ಎಂದರು.

ಯೋಜನೆಗಳ ಪರಿಣಾಮಗಳ ಅಧ್ಯಯನ:
ಸರಕಾರದ ಯೋಜನೆಗಳ ಪರಿಣಾಮಗಳ ಕುರಿತು ಅಧ್ಯಯನ ಮಾಡಿ ಅದರ ಪರಿಣಾಮಗಳ ಬಗ್ಗೆ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ ಪುಸ್ತಕವನ್ನು ಹೊರತಂದಿದೆ. ಈ ಅಧ್ಯಯನವನ್ನು ಮುಂದುವರೆಸಿ, ಪ್ರತಿ ವಲಯದಲ್ಲಿ ಅದರ ಪರಿಣಾಮ, ಉತ್ತಮ ಅಂಶಗಳು ಹಾಗೂ ಕೊರತೆಗಳನ್ನು ಕಾಲಕಾಲಕ್ಕೆ ತಿಳಿಸುವಂತೆ ಮುಖ್ಯಮಂತ್ರಿಗಳು ಸಂಸ್ಥೆಯ ನಿರ್ದೇಶಕರಿಗೆ ತಿಳಿಸಿದರು.


Spread the love

About Laxminews 24x7

Check Also

ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ

Spread the love ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ ಉಗರಗೋಳ, ಚಿಕ್ಕುಂಬಿಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸವದತ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ