ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚೆನ್ನಾಪೂರ ಗ್ರಾಮದ ಬಳಿ ದ್ವಿಚಕ್ರ ವಾಹನ ಹಾಗೂ ಸ್ವಿಪ್ಟ್ ಕಾರು ಮುಖಾಮುಖಿ ಢಿಕ್ಕಿಯಾಗಿ, ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಮೂಲಕ ಚೆನ್ನಾಪೂರ ಗ್ರಾಮದ ಕಡೆಗೆ ದ್ವಿಚಕ್ರ ವಾಹನದ ಮೂಲಕ ಹೊರಟ್ಟಿದ್ದ ಮೂವರು ಚೆನ್ನಾಪೂರ ಕಡೆಯಿಂದ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅವಘಡ ಸಂಭವಿಸಿದೆ.
ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಮೂಲತಃ ಹೆಬ್ಬಾಳ ಗ್ರಾಮದ ಹಾಲಿ ಮುಧೋಳ ತಾಲೂಕಿನ ಲೋಕಾಪೂರ ಗ್ರಾಮದ ಮನೋರಾಜ ಹೆಬ್ಬಾಳಪ್ಪ ಸಾಲಮಂಟಪಿ ಎಂದು ಗುರುತಿಸಲಾಗಿದೆ.ಗಂಭೀರವಾಗಿ ಗಾಯಗೊಂಡವರು ಲೋಕಾಪೂರದ ರಾಮವ್ವ ಈರನ್ನವರ ಹಾಗೂ ಅಕ್ಷತಾ ಈರನ್ನವರ ಎಂಬವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರು ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಮದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.