ಬೆಳಗಾವಿ: ರಾಜ್ಯದ ಶಾಸಕಿಯಾಗಿದ್ದರೂ ಕನ್ನಡ ಮಾತನಾಡಲು ಬಾರದ ಜನರಿಗಾಗಿ ಮರಾಠಿಯಲ್ಲಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ವಿರುದ್ಧವೇ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿರುವುದು.
ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮ ಒನ್ ಕೇಂದ್ರದ ಉದ್ಘಾಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್, ಕನ್ನಡ ಬಾರದವರಿಗಾಗಿ ಮರಾಠಿಯಲ್ಲಿ ಮಾಹಿತಿ ಹಾಗೂ ನಾಮಫಲಕ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ವಿಡಿಯೋವನ್ನು ಸ್ವತಃ ಅವರೇ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನು ಗಮನಿಸಿದ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.