ಮುಂಬೈ: ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ c
ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್‌ಬಿ ರೋಟೆ ಅವರು ರಾಣೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಕಳೆದ ಡಿಸೆಂಬರ್ 2021ರಲ್ಲಿ ಸಿಂಧುದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತ ಸಂತೋಷ್ ಪರಬ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣವನ್ನು ದಾಖಲಿಸಲಾಗಿತ್ತು.ಪ್ರಕರಣ ಸಂಬಂಧಿಸಿ ರಾಣೆಯನ್ನು 10 ದಿನಗಳ ಕಾಲ ಬಂಧಿಸದಂತೆ ಸುಪ್ರೀಂ ಕೋರ್ಟ್ ಕಳೆದ ಗುರುವಾರ ಮಹಾರಾಷ್ಟ್ರ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಶಾಸಕ ನಿತೇಶ್ ರಾಣೆ ಬಂಧನದ ಪೂರ್ವ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡುವಾಗ ಸುಪ್ರೀಂ ಕೋರ್ಟ್ ಮುಂದೆ ನಿಯಮಿತ ಜಾಮೀನು ಪಡೆಯಲು ಕೇಳಿಕೊಂಡಿದ್ದರು. ಇದಕ್ಕೂ ಮೊದಲು, ಬಾಂಬೆ ಹೈಕೋರ್ಟ್ ಜನವರಿ ೧೭ ರಂದು ಪ್ರಕರಣದಲ್ಲಿ ನಿತೇಶ್ ರಾಣೆಗೆ ಪೂರ್ವ ಬಂಧನ ಜಾಮೀನು ನೀಡಲು ನಿರಾಕರಿಸಿತ್ತು.
Laxmi News 24×7