Breaking News

ಈ ಬಾರಿ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಬದಲಾಯಿಸಿಲ್ಲ.: ನಿರ್ಮಲಾ ಸೀತಾರಾಮನ್‌

Spread the love

ನವದೆಹಲಿ: ಕೋವಿಡ್‌ ಸಾಂಕ್ರಾಮಿಕದ ಮಧ್ಯೆ ತೆರಿಗೆಯನ್ನು ಹೆಚ್ಚಿಸದಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಹೀಗಾಗಿ ಈ ಬಾರಿಯ ಬಜೆಟ್‌ನಲ್ಲಿ ಜನರಿಂದ ಯಾವುದೇ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ಇಳಿದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬಜೆಟ್‌ ಬಳಿಕ ಇಲಾಖೆಯ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್‌ ಸಂಕಷ್ಟದಲ್ಲಿರುವ ಜನರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಬಾರದು ಎಂದು ಪ್ರಧಾನಿ ಮೋದಿ ಅವರು ಕಳೆದ ವರ್ಷ ಸೂಚಿಸಿದ್ದರು. ಈ ಕಾರಣಕ್ಕೆ ಈ ಬಾರಿಯೂ ಯಾವುದೇ ತೆರಿಗೆ ಹಾಕಿಲ್ಲ ಎಂದು ತಿಳಿಸಿದರು.

ಕೇಂದ್ರ ಬಜೆಟ್ ಭಾಷಣದದಲ್ಲಿ ನಿರ್ಮಲಾ ಸೀತಾರಾಮನ್‌ ಮಹಾಭಾರತದ ಹದಿನೆಂಟು ಅಧ್ಯಾಯಗಳಲ್ಲಿ 12ನೆಯದಾದ ಶಾಂತಿಪರ್ವದಲ್ಲಿ ಬರುವ ಪದ್ಯವೊಂದನ್ನು ಪ್ರಸ್ತಾಪಿಸಿದ್ದರು. ರಾಜನಾದವನು ಜನರ ಯೋಗಕ್ಷೇಮಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಬೇಕು. ಇದಕ್ಕಾಗಿ ಅವನು ಧರ್ಮಕ್ಕೆ ಅನುಸಾರವಾಗಿ ಬೇಜವಾಬ್ದಾರಿ ಬಿಟ್ಟು ಆಡಳಿತ ನಡೆಸಬೇಕು. ತೆರಿಗೆಗಳನ್ನು ಸರಿಪಡಿಸಬೇಕು ಎಂಬ ಶ್ಲೋಕವನ್ನು ಉಲ್ಲೇಖಿಸಿದರು. 

ಸಾಧಾರಣವಾಗಿ ಬಜೆಟ್‌ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಬದಲಿಸಲಾಗುತ್ತದೆ. ಆದರೆ ಈ ಬಾರಿ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಬದಲಾಯಿಸಿಲ್ಲ.


Spread the love

About Laxminews 24x7

Check Also

ಉಡುಪಿ: ಸೆಪ್ಟೆಂಬರ್ 7ರಂದು ಖಗ್ರಾಸ ಚಂದ್ರಗ್ರಹಣ; ಕೆಂಬಣ್ಣದ ಚಂದಿರನ ದರ್ಶನ

Spread the love ಉಡುಪಿ: ಸೆ.7ರ ಹುಣ್ಣಿಮೆಯ ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಖಗ್ರಾಸ ಚಂದ್ರ ಗ್ರಹಣದ ವೇಳೆ, ಚಂದ್ರನು ತಾಮ್ರದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ