Breaking News

ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ,ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Spread the love

ಪಣಜಿ: ಗೋವಾ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಬಿಜೆಪಿ ಅವರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಗೋವಾದ ಎರಡು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಾರೆ. ಆದರೆ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಗೋವಾ ಬಿಜೆಪಿ ಸರ್ಕಾರ ಬಹಳಷ್ಟು ಹಗರಣ, ಭ್ರಷ್ಟಾಚಾರ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ನೇಮಿಸಿದ ರಾಜ್ಯಪಾಲರು ಈ ಹೇಳಿಕೆಯನ್ನು ನೀಡಿದ್ದಾರೆ. ಇದಕ್ಕಿಂತ ಏನಾದರೂ ಸಾಕ್ಷಿ ಬೇಕಾ? ಅಂಗೈ ಹುಣ್ಣಿಗೆ ಕನ್ನಡಿ ಬೇಕಾ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.

ಗೋವಾದ ಪ್ರಬುದ್ಧ ಮತದಾರರು ಭ್ರಮನಿರಸನಗೊಂಡಿದ್ದಾರೆ. ಹತ್ತು ವರ್ಷದಿಂದ ಬಿಜೆಪಿಯವರು ಏನ್ ಮಾತನಾಡಿದ್ದಾರೋ ಅದನ್ನು ಮಾಡಿಲ್ಲ. ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಜನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ