Breaking News

ದೆಹಲಿಗೆ ಹಾರಲಿದ್ದಾರಂತೆ ರಮೇಶ್​ ಜಾರಕಿಹೊಳಿ

Spread the love

ಬೆಳಗಾವಿ : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವಾಕಾಂಕ್ಷಿಗಳ ಕಸರತ್ತು ಮುಂದುವರೆದಿದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಲ ಶಾಸಕರು ಈಗಾಗಲೇ ಗುಪ್ತ ಸಭೆ, ಮಾತುಕತೆಯಲ್ಲಿ ತೊಡಗಿದ್ದಾರೆ. ಈ ನಡುವೆ ಮತ್ತೆ ಸಚಿವರಾಗಬೇಕೆಂದು ತೆರೆಮರೆಯಲ್ಲಿ ಕಸರತ್ತು ಮುಂದುವರೆಸಿರುವ ಮಾಜಿ ಮಂತ್ರಿ ರಮೇಶ್​ ಜಾರಕಿಹೊಳಿ ದೆಹಲಿಗೆ ಹಾರಲಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಗೋವಾಕ್ಕೆ ತೆರಳಿರುವ ಮಾಜಿ ಸಚಿವ ಜಾರಕಿಹೊಳಿ, ಅಲ್ಲಿಂದ ದೆಹಲಿಗೆ ತೆರಳಿ ಹೈಕಮಾಂಡ್​ ಭೇಟಿಗೆ ಮುಂದಾಗಲಿದ್ದಾರೆ. ಆ ಮೂಲಕ ಮತ್ತೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಮಾತುಕತೆ ನಡೆಸಲಿದ್ದಾರೆ ಎಂಬ ಮಾತು ಕೇಳಿ ಬಂದಿವೆ.

ಇತ್ತೀಚೆಗೆ ಮಾಜಿ ಸಚಿವ ರೇಣುಕಾಚಾರ್ಯ ಕೂಡ ಸಚಿವರಾಗಲು ತೀವ್ರ ಯತ್ನ ನಡೆಸುತ್ತಿದ್ದಾರೆ. 15 ಸಚಿವರನ್ನು ಸಂಪುಟದಿಂದ ಕೈಬಿಡಬೇಕು, ದುರಹಂಕಾರಿ ಸಚಿವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು ನೀಡಿದ್ದೇನೆ ಎಂದು ಇತ್ತೀಚೆಗೆ ಸ್ವಪಕ್ಷೀಯ ಸಚಿವರ ವಿರುದ್ಧವೇ ಅವರು ಗುಡುಗಿದ್ದರಲ್ಲದೆ, ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ