ದಾವಣಗೆರೆ: ಯಾರು ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ. ಅವರು ಎಂಟಿಆರ್ ಫುಡ್ ಇರ್ಬೇಕು. ಆದ್ರೆ ನಾನು ಎಂಟಿಆರ್ ಫುಡ್ ಅಲ್ಲವೆಂದು ಹೇಳುವ ಮೂಲಕ ಸ್ವಪಕ್ಷೀಯ ಸಚಿವರಿಗೆ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಹೋರಾಟ ಮಾಡಿಯೇ ಮೂರು ಬಾರಿ ಶಾಸಕನಾಗಿದ್ದೇನೆ. ಬೀದಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ರೇ ಸಚಿವ ಸ್ಥಾನ ಸಿಗುತ್ತಾ ಎಂದು ಪಕ್ಷದ ಸಚಿವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಅವಕಾಶ ಕೊಡಲೇಬೇಕೆಂದು ಕೇಳಿದ್ದೇನೆ. ಅನುಭವ ಇದೆ, ಮೂರು ಬಾರಿ ಗೆದ್ದಿದ್ದೇನೆ. ಹಾಗಾಗಿ ಸಚಿವ ಸ್ಥಾನ ಕೊಡಿ ಎಂದು ಕೇಳಿದ್ದೇನೆ ಎಂದರು.
