Breaking News

ರವಿ ಡಿ ಚೆನ್ನಣ್ಣನವರ ವಿರುದ್ಧದ ಅಕ್ರಮ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

Spread the love

ಮೈಸೂರು: ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ ವಿರುದ್ಧ ಕೇಳಿಬಂದಿರುವ ಅಕ್ರಮ ಆಸ್ತಿ ಸಂಪಾದನೆ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ನಗರದ ಕರ್ನಾಟಕ ಪೊಲೀಸ್​ ಅಕಾಡೆಮಿಯಲ್ಲಿ 228 ಪ್ರೊಬೆಷನರಿ ಪಿಎಸ್ಐ ಗಳ ಪಥ ಸಂಚಲನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ ವಿರುದ್ಧ ಕೇಳಿಬಂದ ಆರೋಪದ ದೂರಿನ ಹಿನ್ನೆಲೆಯಲ್ಲಿ ತನಿಖೆ ಶುರುವಾಗಿದೆ. ಯಾರು ಬೇಕಾದರೂ ಯಾರ ಮೇಲಾದರೂ ಆರೋಪ ಮಾಡಬಹುದು. ಆದ್ರೆ ತನಿಖೆಯಿಂದ ಸತ್ಯ ಗೊತ್ತಾಗುತ್ತದೆ ಎಂದರು.

ರವಿ ಡಿ ಚೆನ್ನಣ್ಣನವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಅಷ್ಟೇ. ಅದು ಶಿಕ್ಷೆ ಮತ್ತು ಬೇರೇನೂ ಅಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಲು ಪೊಲೀಸ್​ ಬಹಳ ಮುಖ್ಯ. ಕಾನೂನು ಪಾಲಿಸದವರ ಮನದಲ್ಲಿ ನಡುಕ ಹುಟ್ಟಿಸುವಂತಹ ಕೆಲಸವನ್ನ ಮಾಡಿ ಎಂದು ಇದೇ ವೇಳೆ ಗೃಹ ಸಚಿವರು ಇಲಾಖೆ ಸಿಬ್ಬಂದಿಗೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ