Breaking News

ಹಿರಿಯ ನಟಿ, ಬಿಜೆಪಿ ಮುಖಂಡೆ ಜಯಪ್ರದಾ ಮನೆಯಲ್ಲಿ ಸಂಭವಿಸಿದ ದುರಂತ

Spread the love

ನವದೆಹಲಿ: ಹಿರಿಯ ನಟಿ ಹಾಗೂ ಬಿಜೆಪಿ ಮುಖಂಡೆ ಜಯಪ್ರದಾ ಅವರಿಗೆ ಮಾತೃ ವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ನೀಲವೇಣಿ (85) ಮಂಗಳವಾರ (ಫೆ. 01) ಮೃತಪಟ್ಟಿದ್ದಾರೆ.

ಅನಾರೋಗ್ಯ ಹಿನ್ನೆಲೆಯಲ್ಲಿ ನೀಲವೇಣಿ ಅವರನ್ನು ಹೈದರಾಬಾದ್​ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಇದೇ ಸಮಯದಲ್ಲಿ ದೆಹಲಿಯಲ್ಲಿದ್ದ ಜಯಪ್ರದಾ ತಾಯಿ ಮೃತಪಟ್ಟಿರುವ ಸುದ್ದಿ ಕೇಳಿ ತಕ್ಷಣ ಹೈದರಾಬಾದ್​ ಕಡೆ ಪ್ರಯಾಣ ಬೆಳೆಸಿದರು. ಜಯಪ್ರದಾ ತಾಯಿಯ ಸಾವಿಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ಜಯಪ್ರದಾ ಓರ್ವ ಬಹುಭಾಷಾ ನಟಿ. ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಡಾ. ರಾಜ್​ಕುಮಾರ್​, ವಿಷ್ಣುವರ್ಧನ್​ ಮತ್ತು ಅಂಬರೀಶ್​ರಂತಹ ಮಹಾನ್​ ನಟರೊಂದಿಗೆ ನಟಿಸಿದ್ದು, ಕನ್ನಡಿಗರಿಗೂ ಚಿರಪರಿಚಿತರಾಗಿದ್ದಾರೆ. ಎಲ್ಲ ಭಾಷೆ ಸೇರಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ