Breaking News

ಇಂದು ರಾಜ್ಯದಲ್ಲಿ 8,580 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ ಮೂರು ಲಕ್ಷದ ಗಡಿ ದಾಟಿದೆ. ಇಂದು ರಾಜ್ಯದಲ್ಲಿ 8,580 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆಯಾಗಿದೆ.

ಮರಣ ಕೇಕೆ ಮುಂದುವರಿಸಿರುವ ಕೊರೊನಾಗೆ ಇಂದು 133 ಸೋಂಕಿತರು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 5,091ಕ್ಕೆ ಏರಿಕೆ ಕಂಡಿದೆ. ಇಂದು 7,249 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ 83,608 ಸಕ್ರಿಯ ಪ್ರಕರಣಗಳಿವೆ. 760 ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು 67,066 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮತ್ತೆ ಮೂರು ಸಾವಿರದ ಗಡಿ ದಾಟಿದ್ದು, ಇಂದು 3,284 ಮಂದಿಗೆ ಸೋಂಕು ತಗುಲಿದೆ. ಸಿಲಿಕಾನ್ ಸಿಟಿಯಲ್ಲಿಂದು 31 ಜನರು ಮರಣವಪ್ಪಿದ್ದು, ಇದುವರೆಗೂ 1,786 ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 1,15,371ಕ್ಕೆ ಏರಿಕೆಯಾಗಿದೆ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 154, ಬಳ್ಳಾರಿ 510, ಬೆಳಗಾವಿ 289, ಬೆಂಗಳೂರು ಗ್ರಾಮಾಂತರ 136, ಬೆಂಗಳೂರು ನಗರ 3,284, ಬೀದರ್ 42, ಚಾಮರಾಜನಗರ 51, ಚಿಕ್ಕಬಳ್ಳಾಪುರ 87, ಚಿಕ್ಕಮಗಳೂರು 97, ಚಿತ್ರದುರ್ಗ 78, ದಕ್ಷಿಣ ಕನ್ನಡ 314, ದಾವಣಗೆರೆ 233, ಧಾರವಾಡ 255, ಗದಗ 124, ಹಾಸನ 154, ಕಲಬುರಗಿ 180, ಕೊಡಗು 26, ಕೋಲಾರ 88, ಕೊಪ್ಪಳ 158, ಮಂಡ್ಯ 155, ಮೈಸೂರು 951, ರಾಯಚೂರು 136, ರಾಮನಗರ 47, ಶಿವಮೊಗ್ಗ 166, ತುಮಕೂರು 88, ಉಡುಪಿ 251, ಉತ್ತರ ಕನ್ನಡ 129, ವಿಜಯಪುರ 131 ಮತ್ತು ಯಾದಗಿರಿಯಲ್ಲಿ 102 ಮಂದಿಗೆ ಸೋಂಕು ತಗುಲಿದೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ